Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ಅಳವಡಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೈಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ನಿಗಾ ವ್ಯವಸ್ಥೆ ಮತ್ತು ಎಐ ತಂತ್ರಜ್ಞಾನ ಒಳವಡಿಸಲಾಗಿದೆ. ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹತ್ತು ನೂತನ ಕ್ಯೂ.ಆರ್ ಟಿಕೆಟ್ ಯಂತ್ರಗಳನ್ನು ಒಳವಡಿಸಲಾಗಿದೆ.
ಸುಧಾರಿತ ಸಿಸಿಟಿವಿ ವ್ಯವಸ್ಥೆ-


ಬೆಂಗಳೂರು ಮೆಟ್ರೋ ರೈಲು ನಿಗಮವು ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆಯ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಇದು ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ ಪ್ರದೇಶಗಳನ್ನೂ ಗಮನಿಸುತ್ತಿದ್ದು
, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ನೆರವಾಗುತ್ತದೆ ಎನ್ನಲಾಗಿದೆ.
ಮೇ 6
, 2025 ರಂದೇ ನಿಗಾ ವ್ಯವಸ್ಥೆ ಪ್ರಾರಂಭಿಸಲಾಗಿದೆ.

ನಿಲ್ದಾಣದ ಮುಂದೆ ಇರುವ ವಾಹನಗಳ ಸಂಖ್ಯಾ ಫಲಕಗಳನ್ನು ಗುರುತಿಸಲು ಆಟೋಮ್ಯಾಟಿಕ್ ನಂಬ‌ರ್ ಪ್ಲೇಟ್ ರೆಕಗ್ನಿಷನ್ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಎಐ ಆಧಾರಿತ ವಿಡಿಯೋ ವಿಶ್ಲೇಷಣೆಯೊಂದಿಗೆ, ಈ ತಂತ್ರಜ್ಞಾನ ಶಂಕಾಸ್ಪದ ಚಟುವಟಿಕೆಗಳು, ಅನುಮಾನಾಸ್ಪದ ಘಟನೆಗಳನ್ನು ತಕ್ಷಣ ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದು ತಿಳಿಸಲಾಗಿದೆ.

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಮಾತನಾಡಿ, ಪ್ರಯಾಣಿಕರ ಭದ್ರತೆ ದೃಷ್ಠಿಯಿಂದ ಮೆಟ್ರೋದ ಪ್ರಮುಖ ಸ್ಥಳಗಳಿಗೆ ಆದ್ಯತೆ ನೀಡಿ ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸುವ ಮೂಲಕ ಭದ್ರತೆ ಹೆಚ್ಚಿಸಲು ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.

ಹೊಸ ಎಐ ಮತ್ತು ANPR ತಂತ್ರಜ್ಞಾನ ನಮಗೆ ನಿಲ್ದಾಣದ ನಿರಂತರ ಕಾರ್ಯ ಚಟುವಟಿಕೆಗಳನ್ನು ಗಮನಿಸಲು ಮತ್ತು ತಕ್ಷಣ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಸಾರ್ವಜನಿಕ ಸುರಕ್ಷತೆಗೆ ಬದ್ಧತೆ ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ವ್ಯವಸ್ಥೆ ಹೆಚ್ಚಾದಂತೆ, ಬಿಎಂಆರ್‌ಸಿಎಲ್ ಸ್ಮಾರ್ಟ್ ನಿಗಾ ವ್ಯವಸ್ಥೆಗಳನ್ನು ಅಳವಡಿಸುವ ಮೂಲಕ ಪ್ರಯಾಣಿಕರ ಸುರಕ್ಷತೆ ಉತ್ತಮಗೊಳಿಸಲು ಹಾಗೂ ಸಾರ್ವಜನಿಕ ಭದ್ರತೆಯನ್ನು ಸದಾ ಬಲಪಡಿಸಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ