Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೋಟ್‌ಬುಕ್‌ವಿತರಿಸಿದ ನ್ಯಾಯವಾದಿ ಬಿ.ಕೆ.ರಹಮತ್‌ವುಲ್ಲಾ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಶೇ.೫ ರಷ್ಟು ಮೀಸಲಾತಿ ನೀಡಬೇಕೆಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಗೌರವಾಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‌ವುಲ್ಲಾ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಪತ್ರಕರ್ತರ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೊಳಗೇರಿಯ ಬಡ ಮಕ್ಕಳಿಗೆ ನೋಟ್‌ಬುಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಓದುವ ಮಕ್ಕಳಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಿದಂತೆ ನಗರ ಪ್ರದೇಶಗಳ ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳಿಗೂ ಶೇ.೫ ರಷ್ಟು ಮೀಸಲಾತಿ ನೀಡಬೇಕು. ಇದರಿಂದ ಸರ್ಕಾರಿ ಉದ್ಯೋಗಕ್ಕೆ ಅನುಕೂಲವಾಗಲಿದೆ. ಕೊಳಗೇರಿ ಪ್ರದೇಶದ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಒಂದು ವೇಳೆ ಶೇ.೫ ರಷ್ಟು ಮೀಸಲಾತಿ ಕೊಡದಿದ್ದರೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.

ಕೊಳಗೇರಿ ನಿವಾಸಿಗಳು ಬಡತನ ಕಾರಣವನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬೇಡಿ, ಹದಿನೆಂಟು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ನೀವುಗಳು ತಿಳಿದುಕೊಂಡಿರಬೇಕೆಂದು ಕೊಳಗೇರಿ ಮಹಿಳೆಯರನ್ನು ಜಾಗೃತಿಗೊಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಸಿ.ರಂಗಾನಾಯ್ಕ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕೊಳಗೇರಿ ನಿವಾಸಿಗಳು ಯಾರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್.ಕೆ.ಜಿ.ಯಿಂದ ಹಿಡಿದು ದ್ವಿತೀಯ ಪಿ.ಯು.ಸಿ.ವರೆಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತದೆ. ಇದರಿಂದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವವರಿಗೆ ಸುಲಭವಾಗುತ್ತದೆ ಎಂದು ಹೇಳಿದರು.

ನ್ಯಾಯವಾದಿ ದಿಲ್‌ಶಾದ್ ಉನ್ನಿಸ ಮಾತನಾಡುತ್ತ ಇಂದಿನ ಮಕ್ಕಳು ಪುಸ್ತಕಗಳ ಹುಳುಗಳಾಗುತ್ತಿದ್ದಾರೆ. ಇಲ್ಲವೇ ಮೊಬೈಲ್‌ನಲ್ಲಿ ಮುಳುಗಿರುತ್ತಾರೆ. ಶಿಕ್ಷಣದ ಜೊತೆ ಆಟಕ್ಕೂ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಕೊಳಗೇರಿ ನಿವಾಸಿಗಳು ಮಕ್ಕಳಿಗೆ ಪಾರ್ಕ್, ಆಟದ ಮೈದಾನ ಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಕೊಡಬೇಕು. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ.

ಮಕ್ಕಳು ದುಶ್ಚಗಳಿಗೆ ಬಲಿಯಾಗುತ್ತಿದ್ದಾರೆ. ಮಕ್ಕಳ ಆರೋಗ್ಯ ಹಾನಿಗೊಳಿಸುವ ಜಾಲವಿದೆ. ನಿಮ್ಮ ಮಕ್ಕಳು ಸರಿಯಾಗಿ ಶಾಲೆಗೆ ಹೋಗುತ್ತಿದ್ದಾರೋ ಇಲ್ಲವೋ ಎನ್ನುವುದರ ಕಡೆ ನಿಮ್ಮಗಳ ಗಮನವಿರಬೇಕೆಂದು ಕೊಳಗೇರಿ ನಿವಾಸಿಗಳಿಗೆ ತಿಳಿಸಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಸ್ವಾಲೇಹ, ಕೆಕೆಎನ್ಎಸ್ಎಸ್ ಲೀಲಾವತಿ, ಶಬಿನಾ ಇವರುಗಳು ವೇದಿಕೆಯಲ್ಲಿದ್ದರು. ಚಂದ್ರಮ್ಮ, ದೀಪ ಇನ್ನು ಅನೇಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್