Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೆಬ್ರವರಿ 5ರಿಂದ 14ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫೆಬ್ರವರಿ 5 ರಿಂದ 14ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ ಎಂದು ಕೆಐಎ ಪ್ರಕಟಿಸಿದೆ.


ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2025 ಹಿನ್ನೆಲೆಯಲ್ಲಿ ಫೆಬ್ರವರಿ 5 ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯು ಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಪ್ರಕಟಿಸಿದೆ.
ಸದ್ಯ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಇದೇ ಸಂದರ್ಭದಲ್ಲಿ ಕೆಐಎ ಪ್ರಕಟಿಸಿದೆ.


ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ ವಾಯು ಪ್ರದೇಶವನ್ನು ಮುಚ್ಚಲಾಗುವುದು ಎಂದು ಕೆಐಎ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗೆಯೇ ಫೆಬ್ರವರಿ 7 ಮತ್ತು 9ರಂದು ಬೆಳಿಗ್ಗೆ 9ರಿಂದ 11ರವರೆಗೆ, ಫೆಬ್ರವರಿ 7ರಂದು ಮಧ್ಯಾಹ್ನ 3ರಿಂದ ಸಂಜೆ 4.30ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು.

ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30ರವರೆಗೆ ಮುಚ್ಚಲಾಗುವುದು. ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30ರವರೆಗೆ ಮುಚ್ಚಲಾಗುವುದು. ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು.

ಪರಿಷ್ಕೃತ ಅಥವಾ ಹೊಸ ವಿಮಾನ ವೇಳಾಪಟ್ಟಿಯ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಕೆಐಎ ಪ್ರಯಾಣಿಕರಿಗೆ ಸಲಹೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ