Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಡಿಪ್ಲೋಮಾ ಕೋರ್ಸ್ : ಅರ್ಜಿ ಸಲ್ಲಿಕೆ ಸೆ. 30 ರವರೆಗೆ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 2 ವರ್ಷಗಳ ಅವಧಿಯ  ಕೋರ್ಸ್ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಲಾಗಿದೆ.

      ಮೊದಲು ಅರ್ಜಿ ಸಲ್ಲಿಕೆಗೆ ಸೆ. 14 ಕೊನೆಯ ದಿನಾಂಕವಾಗಿತ್ತು.  ಇದೀಗ ಅರ್ಜಿ ಸಲ್ಲಿಕೆ   ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಲಾಗಿದ್ದು, ಅರ್ಜಿಯನ್ನು  www.uahs.edu.in ವೆಬ್ಸೈಟ್ ನಲ್ಲಿ ಅಧಿಸೂಚನೆಗಳು ಶೀರ್ಷಿಕೆಯಡಿ ಡೌನ್ಲೋಡ್ ಮಾಡಿಕೊಂಡು ಸಲ್ಲಿಸಬೇಕು.

     ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನಿಷ್ಟ ಶೇ. 45 ಅಂಕಗಳೊಂದಿಗೆ ತೇರ್ಗಡೆಯಾಗಿರಬೆಕು.  (.ಜಾತಿ, .ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳು ಕನಿಷ್ಟ ಶೇ. 40).  ವಯಸ್ಸು 19 ವರ್ಷ ಮೀರಿರಬಾರದು.  ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ.  

ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನು ವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಬೋಧನೆ ಇರುತ್ತದೆ.  ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ, ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುವುದು.  

ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಉಡುಪಿ ಜಿಲ್ಲೆ, ಮೊಬೈಲ್ ಸಂ. 9108241342 ಅಥವಾ 9686405090, ಇಮೇಲ್-  [email protected]  ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ