Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

‘ಅಹಿಂದ ಯಾರ ಆಸ್ತಿಯೂ ಅಲ್ಲ’: ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ವಿರುದ್ಧ ಬಿರುಕಿನ ಸುಳಿವು?

 ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಅಹಿಂದಚಳುವಳಿಯ ರಜತ ಮಹೋತ್ಸವ ಮತ್ತು ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಆಹ್ವಾನ ನೀಡದಿರುವ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 "ಅಹಿಂದ ಎನ್ನುವುದು ಯಾರ ಒಬ್ಬರ ಸ್ವತ್ತೂ ಅಲ್ಲ, ಅದನ್ನು ಯಾರು ಬೇಕಾದರೂ ಮಾಡಬಹುದು" ಎಂದು ಮಾರ್ಮಿಕವಾಗಿ ಹೇಳುವ ಮೂಲಕ ತಮ್ಮ ರಾಜಕೀಯ ನಡೆ ಹಾಗೂ ಮುನಿಸನ್ನು ಬಹಿರಂಗಪಡಿಸಿದ್ದಾರೆ.

Advertisement

​ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನನ್ನನ್ನು ಯಾರೂ ಆಹ್ವಾನಿಸಿಲ್ಲ. ಸಂಘಟಕರು ಕರೆದಿದ್ದರೆ ಖಂಡಿತ ಹೋಗುತ್ತಿದ್ದೆ. ಕರೆಯದೆ ಹೇಗೆ ಹೋಗಲು ಸಾಧ್ಯ? ಆದರೂ ಈ ವಿಷಯವನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ನನ್ನನ್ನು ಯಾಕೆ ಕರೆದಿಲ್ಲ ಎಂದು ಆಯೋಜಕರನ್ನೇ ಕೇಳಿ" ಎಂದು ಟಾಂಗ್ ನೀಡಿದರು.

​ಬೆನ್ನೆಲುಬಾಗಿದ್ದ ನಾಯಕನಿಗೇ ಇಲ್ಲದ ಆಹ್ವಾನ!:
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಆದರೆ, ಅಹಿಂದ ಚಳುವಳಿಯ ಆರಂಭಿಕ ದಿನಗಳಿಂದಲೂ ಸಿದ್ದರಾಮಯ್ಯ ಅವರ ಕೈ ಹಿಡಿದು, ಸಂಘಟನೆಯ ಬೆನ್ನೆಲುಬಾಗಿ ನಿಂತಿದ್ದ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಆಹ್ವಾನ ನೀಡದಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

​ಗುರು-ಶಿಷ್ಯರಂತಿದ್ದ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಇತ್ತೀಚಿನ ದಿನಗಳಲ್ಲಿ ಸಂಬಂಧ ಹಳಸಿದ್ದು, ಇಬ್ಬರ ನಡುವಿನ ಕಂದಕ ಹೆಚ್ಚಾಗಿರುವುದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

​ವಿಶೇಷ ಅಧಿವೇಶನ ಹಾಗೂ ಸರ್ಕಾರದ 100 ದಿನ:
ಇದೇ ವೇಳೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾತನಾಡಿದ ಜಾರಕಿಹೊಳಿ, "ಬರಗಾಲ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೊಸ ಕಾರ್ಯಕ್ರಮಗಳನ್ನು ಘೋಷಿಸಬಹುದು ಅಥವಾ ಈಗಾಗಲೇ ಜಾರಿಯಲ್ಲಿರುವ ಯೋಜನಾ ಪರಿಶೀಲನೆ ನಡೆಸಬಹುದು" ಎಂದು ತಿಳಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು