Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಥಾನಮಾನಗಳ ಹಿನ್ನೋಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಥಾನಮಾನಗಳ ಹಿನ್ನೋಟ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ಈ ದಿನಕ್ಕೆ ಸರಿಯಾಗಿ
52 ವರ್ಷಗಳ ಹಿಂದಿನ ದಿನಮಾನದಲ್ಲಿ ಪ್ರಥಮವಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದ ಸಂವಿಧಾನದ ಆಡಳಿತದಲ್ಲಿ ಸತತವಾಗಿ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಪ್ರಥಮವಾಗಿ ಶಾಸಕರಾದ ಅವದಿಯಲ್ಲಿ ರಾಜ್ಯ ಸರ್ಕಾರದ ಲಿಡ್ಕರ್ ನಿಗಮಕ್ಕೆ ಅಧ್ಯಕ್ಷರಾಗಿದ್ದರು. 5 ಬಾರಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ.

2 ಬಾರಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರುವ ಅವಕಾಶದಿಂದ ವಂಚಿತರಾಗಿದ್ದಾರೆ. 2 ಬಾರಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆ ಮಾಡಿದ್ದಾರೆ. 2 ಬಾರಿ ಲೋಕಸಭಾ ಸಂಸದರಾಗಿ. 1 ಬಾರಿ ಕೇಂದ್ರದಲ್ಲಿ ಸಚಿವರಾಗಿ. 1ಬಾರಿ ಲೋಕಸಭೆಯ  ಆಡಳಿತಕ್ಕೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ರಾಜ್ಯಸಭಾ ಸಂಸದರಾಗಿ. ರಾಜ್ಯಸಭಾ ಸಂಸತ್ ನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಈ ವಿಚಾರಗಳು ಮಲ್ಲಿಕಾರ್ಜುನ ಖರ್ಗೆ ಅವರು  ರಾಜಕೀಯವಾಗಿ ಬೆಳೆದು ಬಂದಿರುವ ಹಿನ್ನೆಲೆ.

 2007 ರಲ್ಲಿ ಮಲ್ಲಿಕಾರ್ಜುನ್ ಖರ್ಗೆಜೀ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರ ಜನ್ಮದಿನಾಚರಣೆ ದಿನದಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಆರ್ ಮಂಜುನಾಥ್ ಅವರೊಂದಿಗೆ ನಾನು ಸೇರಿದಂತೆ ಇನ್ನು ಕೆಲವು ಸ್ನೇಹಿತ ರಾಜಕೀಯ ಮುಖಂಡರುಗಳು ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಜೀ ಅವರ ನಿವಾಸಕ್ಕೆ ತೆರಳಿ ಜನ್ಮದಿನಾಚರಣೆಯ ಗೌರವವನ್ನು ದೊಡ್ಡ ಪ್ರಮಾಣದಲ್ಲಿ ಅರ್ಪಿಸಿದ್ದೆವು.

ಆ ಸಂದರ್ಭದಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ರಾಜಕೀಯದ  ವಿಚಾರಗಳು ಚರ್ಚೆಗೆ ಬಂದಿತ್ತು ಈ ಎಲ್ಲಾ ಸೂಕ್ಷ್ಮತೆಯ ರಾಜಕೀಯ ವಿಚಾರಗಳು ಸಕಾರಾತ್ಮಕವಾಗಿ ಬಳಸಿಕೊಳ್ಳಲು ಉತ್ತಮ ವಿಚಾರಗಳಾಗಿದ್ದವು.
ಕಿರು ಲೇಖನ-ರಘು ಗೌಡ
9916101265



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ