Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶವಾಣಿ: ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಫೆ.28 ಅರ್ಜಿ ಸಲ್ಲಿಸಲು ಕೊನೆಯ ದಿನ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೊಮಾ / ಪತ್ರಿಕೋದ್ಯಮ / ಸಮೂಹ ಮಾಧ್ಯಮದಲ್ಲಿ ಪದವಿ ಅಥವಾ ಯಾವುದೇ ಪದವಿಯೊಂದಿಗೆ ಮಾಧ್ಯಮದಲ್ಲಿ ಎರಡು ವರ್ಷಗಳ ಅನುಭವ. ವಯೋಮಿತಿ 24 ರಿಂದ 50 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಸರಿಯಾಗಿ), ಅರ್ಜಿದಾರರು ಅರ್ಜಿ ಸಲ್ಲಿಸುವ ಜಿಲ್ಲೆಯ ಜಿಲ್ಲಾ ಕೇಂದ್ರದ ನಿವಾಸಿಯಾಗಿರಬೇಕು. ಅಥವಾ ಕೇಂದ್ರದಿಂದ 10 ಕಿ.ಮೀ. ಒಳಗಿನ ನಿವಾಸಿಯಾಗಿರಬೇಕು. ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್‍ನಲ್ಲಿ ಜ್ಞಾನ ಹೊಂದಿರಬೇಕು. ಸುದ್ದಿ ಸಂಗ್ರಹಕ್ಕೆ ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.

ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಇದೇ ಫೆಬ್ರವರಿ 28 ರೊಳಗೆ ತಲುಪುವಂತೆ The Deputy Director General (E) , (Attn: Regional News Unit), Akashvani, Raj Bhavan Road, Bengaluru 560 001  ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 – 22356344 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ