Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಗ್ರಂಥಾಲಯಗಳಿಗೆ ಅಲೆಕ್ಸಾ ಮತ್ತು ಬುಕ್ಸ್ ಕಿಟ್ ವಿತರಣೆ- ಸಿಇಓ ಡಾ.ಕೆ.ಎನ್.ಅನುರಾಧ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ.:
ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ
, ಕಲೆ, ವಿಜ್ಞಾನ, ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್ ಅನುರಾಧ ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮತ್ತು ಪಾಲಕರಿಗೆ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಗ್ರಂಥಾಲಯವನ್ನು ತೆರೆಯಬೇಕು. ಗ್ರಂಥಾಲಯದಲ್ಲಿ ಅಚ್ಚುಕಟ್ಟಾಗಿ ಪುಸ್ತಕಗಳ ಜೋಡಣೆ, ಸ್ವಚ್ಛತೆಯನ್ನು ಕಾಪಾಡಬೇಕು, ಸರ್ಕಾರದಿಂದ ಬರುವ ಎಲ್ಲಾ ಪುಸಕಗಳನ್ನು ಆಯಾ ಪಂಚಾಯಿತಿಯ ಪಿ.ಡಿ.ಒ ಗಳ ಬಳಿ ಗ್ರಂಥಾಲಯದ ಮೇಲ್ವಿಚಾರಕರು ಅಥವಾ ಪಾಲಕರು ನೋಂದಾಯಿಸಿಕೊಂಡು ಪಡೆದುಕೊಳ್ಳಬೇಕು. ಮಕ್ಕಳಿಗೆ ಓದುಗರಿಗೆ ಉತ್ತಮ ರೀತಿಯಲ್ಲಿ ಓದಲು ಪುಸ್ತಕ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಿಎಸ್ಆರ್ ಅನುದಾನದಡಿ ಕ್ಯಾಟರ್ಪಿಲ್ಲರ್ ಸಂಸ್ಥೆ ವತಿಯಿಂದ ಅರಿವು ಕೇಂದ್ರಗಳಿಗೆ ಬುಕ್ಸ್ ಕಿಟ್ ವಿತರಣೆ ಮತ್ತು ವಿಶೇಷವಾಗಿ ದೃಷ್ಟಿ ಸವಾಲಿರುವವರಿಗೆ ಕೇಳುವಿಕೆಯೇ ಕಲಿಕೆಯ ವಿಧಾನವಾಗಿದೆ ಅದಕ್ಕಾಗಿ ಅಲೆಕ್ಸಾ ಸಾಧನ ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ್ದ ಜಯಲಕ್ಷ್ಮಿ ಅವರು ಗ್ರಂಥಾಲಯ ಮೇಲ್ವಿಚಾರಕರಿಗೆ ಮತ್ತು ಪಾಲಕರಿಗೆ ಪುಸ್ತಕಗಳ ಜೋಡಣೆ, ಮಕ್ಕಳ ಆಸಕ್ತಿ ತಿಳಿದು ಅವರಿಗೆ ಬೇಕಾದ ಪುಸ್ತಕ ವಿತರಣೆ, ಕಲಿಕೆ ಆಕರ್ಷಣೆ ಹೀಗೆ ಹಲವಾರು ವಿಷಯಗಳ ಬಗ್ಗೆ ಕಾರ್ಯಗಾರ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಪ್ರಥಮ್ ಬುಕ್ ಅಸೋಸಿಯೇಟ್ ಅಧಿಕಾರಿ ಪ್ರದೀಪ್ ದೇವರಾಜ್, ಕ್ಯಾಟರ್ಪಿಲ್ಲರ್ ಸಂಸ್ಥೆಯ ಅಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು