Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್ 14 ರಿಂದ 20ರ ವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ: ಸಹಕಾರ ಸಚಿವ ರಾಜಣ್ಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವೆಂಬರ್ 14 ರಿಂದ 20 ವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮನ್ನು ಪ್ರತಿ ವರ್ಷದಂತೆ ವರ್ಷವು ಸಹ  ಹಮ್ಮಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕುರಿತ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ದೇಶದ ಪ್ರಧಾನ ಮಂತ್ರಿ ಜವಹರ್ ಲಾಲ್ ನೆಹರು ಹುಟ್ಟು ಹಬ್ಬದ ಅಂಗವಾಗಿ  ರಾಜ್ಯದಲ್ಲಿ ಎಲ್ಲಾ ಸಹಕಾರಿಗಳು ಸೇರಿ ಹಬ್ಬದ ರೀತಿಯಲ್ಲಿ ಸಹಕಾರ ಸಪ್ತಾಹವನ್ನು ಆಚರಿಸಲಾಗುವುದು ಎಂದರು.

ಏಳು ದಿನ ನಡೆಯುವ ಸಹಕಾರ ಸಪ್ತಾಹದಲ್ಲಿ ಪ್ರತಿ ದಿನ ಸಹಕಾರಿ ಸಪ್ತಾಹದ ಬಗ್ಗೆ ಪ್ರಸ್ತಾಪಿಸಿ, ಪರಿಣಿತರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು ಹಾಗೂ ರಾಜ್ಯದ ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ರಾಜ್ಯದ ಸಹಕಾರಿಗಳು ಉನ್ನತ ಮಟ್ಟದಲ್ಲಿ ರಾಜ್ಯದ ಜನತೆಯ ಸೇವೆ ಮಾಡಬೇಕು. ಎಲ್ಲಾ ಗ್ರಾಮದವರಿಗೂ ಸಹಕಾರ  ಸಪ್ತಾಹದ  ಬಗ್ಗೆ ಅರಿವು ಮೂಡಿಸಬೇಕು. ಸಹಕಾರಿ ಆಂದೋಲನ ಜನರ ಆಂದೋಲನವಾಗಿ ಪರಿವರ್ತನೆಯಾಗಬೇಕೆಂದರು.

ಕಾರ್ಯಕ್ರಮಕ್ಕೆ ಸರ್ಕಾರ ಹಣವನ್ನು ವೆಚ್ಚ ಮಾಡುವುದಿಲ್ಲ.  ಸಹಕಾರಿಗಳೇ ಕಾರ್ಯಕ್ರಮದ ವೆಚ್ಚವನ್ನು ಭರಿಸಿ ಕಾರ್ಯಕ್ರಮ ಆಯೋಜಿಸಲಿರುವರು. ಸಹಕಾರ ಸಪ್ತಾಹದಲ್ಲಿ ಮಾನ್ಯ  ಮುಖ್ಯಮಂತ್ರಿಗಳು ಸಹ ಭಾಗವಹಿಸಲಿದ್ದು, ಕಾರ್ಯಕ್ರಮದ ಸ್ಥಳವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಶಾಸಕರು, ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ