Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ವಿಸ್ತರಿಸಲು ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂಜೆ ಆಗ್ರಹಿಸಿದೆ.


ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದಿಸುವುದಾಗಿ ತಿಳಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಯೋಜನೆ ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ.

  ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದು ಅಷ್ಟೇ ಅಲ್ಲ, ಬಜೆಟ್‌ನಲ್ಲಿಯೂ ಪ್ರಕಟಿಸಿ ನುಡಿದಂತೆ ನಡೆದಿದ್ದರು. ಈ ನಿಟ್ಟಿನಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪಾತ್ರವೂ ಪ್ರಾಮುಖ್ಯವಾಗಿತ್ತು ಎನ್ನುವುದನ್ನು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ಮರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ