Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

KEA ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ಆರೋಪ: ಮರುಪರೀಕ್ಷೆಗೆ ಆರ್. ಅಶೋಕ್ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇತ್ತೀಚೆಗೆ ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಟ್ವೀಟ್ (X) ಮಾಡಿರುವ ಅವರು, ಕೂಡಲೇ ಪರೀಕ್ಷೆಯನ್ನು ರದ್ದುಗೊಳಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ, ಮರುಪರೀಕ್ಷೆ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

​ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್. ಅಶೋಕ್, "ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಕೆಪಿಎಸ್‌ಸಿ ಹಗರಣದ ಬಳಿಕ ಈಗ ಕೆಇಎ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ಕೇಳಿಬಂದಿದೆ" ಎಂದು ಆಕ್ರೋಶ ಹೊರಹಾಕಿದ್ದಾರೆ.

​ಆರೋಪದ ಹಿನ್ನೆಲೆ ಏನು?:
​ಮೇ 10ರಂದು ರಾಜ್ಯದ ಒಟ್ಟು 17 ಕೇಂದ್ರಗಳಲ್ಲಿ ಕೃಷಿ ವಿಜ್ಞಾನ ಕೋರ್ಸ್‌ಗಳ ಆಯ್ಕೆಗಾಗಿ ಪ್ರಾಯೋಗಿಕ ಪರೀಕ್ಷೆ ನಡೆದಿತ್ತು. ಆದರೆ, ಚಿತ್ರದುರ್ಗದ ಹಿರಿಯೂರು ಪರೀಕ್ಷಾ ಕೇಂದ್ರವೊಂದರಲ್ಲೇ ಬರೋಬ್ಬರಿ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಪೂರ್ಣ ಅಂಕಗಳು ಬಂದಿರುವುದು ಈಗ ಭಾರಿ ಸಂಶಯಕ್ಕೆ ಕಾರಣವಾಗಿದೆ.

​"ಒಂದೇ ಕೇಂದ್ರದಲ್ಲಿ ಇಷ್ಟೊಂದು ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ (200/200) ಮಾರ್ಕ್ಸ್ ಬಂದಿರುವುದು ಪರೀಕ್ಷಾ ಅಕ್ರಮ ನಡೆದಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದು ವಿದ್ಯಾರ್ಥಿಗಳ ಪೋಷಕರೇ ಆರೋಪಿಸುತ್ತಿದ್ದಾರೆ" ಎಂದು ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಿಗೆ ಒತ್ತಾಯ:
​ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿರುವ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.

​ಸಿಎಂ ಸಿದ್ದರಾಮಯ್ಯ ಅವರಿಗೆ: "ಬಡ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ" ಎಂದು ಎಚ್ಚರಿಸಿದ್ದಾರೆ.

​ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ: "ಕೃಷಿ ವಿಜ್ಞಾನ ಕೋರ್ಸ್‌ಗಳ ಈ ಪ್ರಾಯೋಗಿಕ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಿ, ಮರುಪರೀಕ್ಷೆ ನಡೆಸುವ ಮೂಲಕ ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು" ಎಂದು ಆರ್. ಅಶೋಕ್ ಪ್ರಬಲವಾಗಿ ಆಗ್ರಹಿಸಿದ್ದಾರೆ.

​ಕೆಪಿಎಸ್‌ಸಿ ವಿವಾದದ ಬೆನ್ನಲ್ಲೇ ಈಗ ಕೆಇಎ ಪರೀಕ್ಷೆಯಲ್ಲೂ ಇಂತಹದ್ದೊಂದು ದೊಡ್ಡ ಮಟ್ಟದ ಅಕ್ರಮದ ಆರೋಪ ಕೇಳಿಬಂದಿರುವುದು ಪೋಷಕರು ಮತ್ತು ವಿದ್ಯಾರ್ಥಿ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST