Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರ ಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಲಿತರ ಜನಸಂಖ್ಯೆಗನುಗುಣವಾಗಿ ೨೦೨೬-೨೭ ರ ಬಜೆಟ್‌ನಲ್ಲಿ ಶೇ.೨೪.೧ ರಷ್ಟು ಅನುದಾನ ಮೀಸಲಿರಿಸಿ ಹಣ ದುರ್ಬಳಕೆ ತಡೆಯಲು ಎಸ್ಸಿಪಿ. ಟಿಎಸ್ಪಿ. ಕಾಯಿದೆ ಸೆಕ್ಷನ್ ೭(ಸಿ) ರದ್ದುಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನ ಸೆಳೆದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಮಾತನಾಡಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಸಿರುವ ೨೫ ಸಾವಿರ ಕೋಟಿ ರೂ.ಗಳನ್ನು ಹಿಂತಿರುಗಿಸಬೇಕು. ಸ್ವಂತ ನಿವೇಶನವಿಲ್ಲದ ಬಡವರು ನಿವೇಶನ ಖರೀಧಿಸಲು ಐದು ಲಕ್ಷ ರೂ.ಗಳ ನೆರವು ನೀಡಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿ ಭೂಮಿ ಖರೀಧಿಸಬೇಕು. ಬಗರ್‌ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಸಲ್ಲಿಸಿರುವ ನಮೂನೆ ೫೭ ರ ಅರ್ಜಿಗಳನ್ನು ಸೂಕ್ತವಾದ ಕಾರಣ ನೀಡದೆ ಏಕಪಕ್ಷೀಯವಾಗಿ ತಿರಸ್ಕಾರ ಮಾಡಿ ಭೂಮಿ ಇಲ್ಲದಿರುವ ಬಡವರನ್ನು ಒಕ್ಕಲೆಬ್ಬಿಸುವುದು ನಿಲ್ಲಬೇಕು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಅವರ ಜನ್ಮದಿನ ಜೂ.೯ ನ್ನು ರಜಾರಹಿತ ದಿನವನ್ನಾಗಿ ಆಚರಣೆ ಮಾಡಬೇಕು. ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಕುಟುಂಬಗಳ ವಸತಿ ರಹಿತರಿಗೆ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿಸಿದಂತೆ ದೇವದಾಸಿ, ವಿಧವಾ ಮಹಿಳೆಯರು, ವೃದ್ದರು ಹಾಗೂ ವಿಕಲಚೇತರಿಗೆ ನೀಡುತ್ತಿರುವ ಮಾಸಿಕ ವೇತನವನ್ನು ಐದು ಸಾವಿರ ರೂ.ಗಳಿಗೆ ಏರಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಅಭಿವೃದ್ದಿಗಾಗಿ ಅನುಷ್ಟಾನಗೊಳಿಸಲಾಗುತ್ತಿರುವ ಗಂಗಾ ಕಲ್ಯಾಣ, ಭೂ ಒಡೆತನ, ನೇರಸಾಲ, ಉದ್ಯಮಶೀಲತಾ ಸ್ವಾವಲಂಭಿ ಸಾರಥಿ ಯೋಜನೆ ಸಾಲ ಸೌಲಭ್ಯಗಳ ಘಟಕ ವೆಚ್ಚವನ್ನು ದ್ವಿಗುಣಗೊಳಿಸುವಂತೆ ಕೆಂಗುಂಟೆ ಜಯಪ್ಪ ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಕೆ.ಆರ್.ಶ್ರೀಧರಮೂರ್ತಿ, ಸಹ ಸಂಚಾಲಕ ಎನ್.ಪ್ರಭಾಕರ್, ಅಂಜನಮೂರ್ತಿ ಆರ್, ಗಣೇಶ, ನಾಗರಾಜ, ರಂಗಪ್ಪ, ಮಂಜಪ್ಪ, ಶ್ರೀನಿವಾಸ, ಶೇಖರಪ್ಪ, ನುಲೇನೂರಿನ ದುರುಗಮ್ಮ, ರಂಗಮ್ಮ, ಕರಿಯಮ್ಮ, ಚಿಕ್ಕಂದವಾಡಿಯ ಶಿವಮ್ಮ, ಭಾಗ್ಯಮ್ಮ, ರುದ್ರಮ್ಮ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ