ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಧಾರ್ಮಿಕ ಮತ್ತು ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಲು ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವುದನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಸ್ವಾಗತಿಸಿದ್ದಾರೆ.
೨೦೨೨ ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಗೊಂದಲ ಉಂಟು ಮಾಡಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲರೂ ಒಂದೆ ಸಮಾನರು. ಸಾಮರಸ್ಯ ಮೂಡಿಸುವ ಉದ್ದೇಶದಿಂದ ಒಂದರಿಂದ ೧೨ ನೇ ತರಗತಿ ಮಕ್ಕಳಿಗೆ ಹಿಜಾಬ್, ತಲೆವಸ್ತ್ರ, ಪೇಟ ಹಾಗೂ ಟರ್ಬನ್ ಧರಿಸಲು ಅವಕಾಶ ಕಲ್ಪಿಸಿ ಸಂಘರ್ಷಕ್ಕೀಡಾಗಿದ್ದ ವಾತಾವರಣವನ್ನು ತಿಳಿಗೊಳಿಸಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್,
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಸೈಯದ್ ಅಫಾಖ್ ಅಹಮದ್ ಇವರುಗಳು ಸ್ವಾಗತಿಸಿ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.


