Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ!?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,....... ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಆಕ್ಯುಪ್ರೆಷರ್, ಮನೆ ಮದ್ದು. ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು.

ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ. ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು. ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು.....

ಎಲ್ಲವೂ ಮನರಂಜನೆ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಕಂಡುಕೊಂಡಿರುವ ಅಭ್ಯಾಸಗಳು, ಮದುವೆ, ಕುಟುಂಬ, ಮಕ್ಕಳು, ಅಳಿಯಂದಿರು, ಸೊಸೆಯಂದಿರು. ಎಲ್ಲವೂ ನಮ್ಮ ಹಿತಾಸಕ್ತಿಗಾಗಿ ನಿರ್ಮಿಸಿಕೊಂಡ ಸಂಬಂಧಗಳು.

ಪೊಲೀಸು, ಮಿಲಿಟರಿ, ಅರೆ ಸೇನಾಪಡೆ, ಗೃಹ ರಕ್ಷಕ ದಳ, ಗಡಿ ಭದ್ರತಾ ಪಡೆ.....ಎಲ್ಲವೂ ನಮ್ಮ ರಕ್ಷಣೆಗಾಗಿ ಮಾಡಿಕೊಂಡ ವ್ಯವಸ್ಥೆ. ಶಿಕ್ಷಣ, ತರಬೇತಿ, ಉದ್ಯೋಗ, ವ್ಯಾಪಾರ, ಉತ್ಪಾದನೆ.....ಎಲ್ಲವೂ ಬದುಕಲು ಕಟ್ಟಿಕೊಂಡ ವ್ಯವಸ್ಥೆ. ಕಾನೂನು, ಆಡಳಿತ, ಅಧಿಕಾರಿಗಳು, ಲೆಕ್ಕ ಪರಿಶೋಧಕರು.....

ಎಲ್ಲರೂ ನಮ್ಮ ಹಿತಕ್ಕಾಗಿ ಸಕ್ರಿಯವಾಗಿರುವವರು. ದೇವರು, ಧರ್ಮ, ದೇವಸ್ಥಾನ, ಪೂಜಾರಿಗಳು..ಎಲ್ಲವೂ ನಮ್ಮ ಮಾನಸಿಕ ನೆಮ್ಮದಿಗಾಗಿ ಸೃಷ್ಟಿಸಿರುವ ವ್ಯವಸ್ಥೆಗಳು.

ಮನೆ, ಹೋಟೆಲ್, ಆಶ್ರಯ, ಛತ್ರ, ಮಠ. ಎಲ್ಲವೂ ನಮ್ಮ ಸೌಕರ್ಯಕ್ಕಾಗಿ ನಿರ್ಮಿಸಿರುವ ಕಟ್ಟಡಗಳು. ಬಾವಿ, ಕೆರೆ, ಸೇತುವೆ, ಕಾಲುವೆ, ಜಲಾಶಯ... ಎಲ್ಲವನ್ನೂ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಲು ನಿರ್ಮಿಸಿರುವ ವ್ಯವಸ್ಥೆಗಳು.

ಹಣ್ಣು, ತರಕಾರಿ, ಬೇಳೆ, ಸಿರಿ ಧಾನ್ಯಗಳು...ಎಲ್ಲವೂ ‌ಆಹಾರಕ್ಕಾಗಿ ಕಂಡುಹಿಡಿದ ವಸ್ತುಗಳು.
ಮಂಡಲ
, ತಾಲ್ಲೂಕು, ಜಿಲ್ಲೆ, ರಾಜ್ಯ, ದೇಶ.......ಎಲ್ಲಾ ವಿಂಗಡನೆಗಳು ತನ್ನ ಸುಖಕ್ಕಾಗಿ ಮಾಡಿರುವ ವ್ಯವಸ್ಥೆಗಳು. ಬಸ್ಸು, ಕಾರು, ರೈಲು, ವಿಮಾನ, ರಾಕೆಟ್‌.......ಎಲ್ಲವನ್ನೂ ತನ್ನ ಪ್ರಯಾಣಕ್ಕಾಗಿ ತಯಾರಿಸಿ ಇಟ್ಟುಕೊಂಡಿರುವ ವ್ಯವಸ್ಥೆಗಳು.

ಅಬ್ಬಾ, ಅಂಕಿ ಸಂಖ್ಯೆಗಳಿಗೆ ನಿಲುಕಲಾರದಷ್ಟು ಅನುಕೂಲಗಳನ್ನು ಮಾಡಿಕೊಂಡು ಮತ್ತು ಮಾಡಿಕೊಳ್ಳುತ್ತಾ ಬದುಕುತ್ತಿದ್ದಾನೆ. ಆದರೆ......ನೆಮ್ಮದಿಯ ಬದುಕು ಅವನದಾಗಿಲ್ಲ. ಸ್ವತಂತ್ರ ಜೀವನ ನಡೆಸಲಾಗುತ್ತಿಲ್ಲ.

ಆಸ್ಪತ್ರೆಗಳು, ಪೋಲೀಸ್ ಸ್ಟೇಷನ್ ಗಳು, ನ್ಯಾಯಾಲಯಗಳು, ಸಿಸಿ ಟಿವಿಗಳು ಹೆಚ್ಚುತ್ತಲೇ ಇವೆ. ಶುದ್ದ ಗಾಳಿ, ಶುದ್ದ ನೀರು, ಶುದ್ದ ಆಹಾರ ಸಿಗುತ್ತಿಲ್ಲ. ಕಣ್ತುಂಬ ನಿದ್ದೆಗಾಗಿ ಪರದಾಡುವಂತಾಗಿದೆ.

ದೇವಸ್ಥಾಗಳ ಮುಂದೆ ಚಪ್ಪಲಿ ಬಿಟ್ಟು ನೆಮ್ಮದಿಯಿಂದ ಒಳಗೆ ಕೈಮುಗಿಯಲು ಕಷ್ಟವಾಗುತ್ತಿದೆ. ಏಕೆಂದರೆ ಹೊರಗೆ ಬರುವಷ್ಟರಲ್ಲಿ ಚಪ್ಪಲಿ ಮಾಯ. ತಾರಸಿ ಮೇಲಿನ ಬಟ್ಟೆಗಳನ್ನು ಕದಿಯಲಾಗುತ್ತಿದೆ.

ಬಸ್ಸು ರೈಲು ನಿಲ್ದಾಣಗಳಲ್ಲಿ ಕಳ್ಳರಿದ್ದಾರೆ ಎಂಬ ಎಚ್ಚರಿಕೆಯ ಬೋರ್ಡುಗಳು. ಒಂದು ಸೈಟು, ಮನೆ ಕೊಳ್ಳಲು ಹಲವಾರು ವಂಚನೆಯ ಅನುಮಾನಗಳು. ಒಂದು ಸಣ್ಣ ಕೆಲಸಕ್ಕೆ ಲಂಚ ನೀಡಬೇಕಾದ ಅನಿವಾರ್ಯತೆ. ಮದುವೆಗಾಗಿ ವಧು ವರರನ್ನು ಹುಡುಕುವುದೇ ಒಂದು ದೊಡ್ಡ ಸಾಹಸ. ರಾತ್ರಿ ಹೊತ್ತು ನೆಮ್ಮದಿಯಾಗಿ ಒಂಟಿಯಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಟಿವಿ ಇಂಟರ್ನೆಟ್ ಎಲ್ಲಾ ‌ಬೆರಳ ತುದಿಯಲ್ಲಿ ಇದ್ದರೂ ಯಾವ ಮಾಹಿತಿ ನಿಜ, ಯಾವುದು ಸುಳ್ಳು ಎಂಬ ಗೊಂದಲ ಎಲ್ಲರಲ್ಲೂ ಇರುತ್ತದೆ. ಪ್ರತಿ ಕ್ಷಣವೂ ಆತಂಕದಲ್ಲೇ ಬದುಕಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಎಲ್ಲಾ ಅನುಕೂಲಗಳೂ ಅನಾನುಕೂಲಗಳಾಗಿರುವ ಪರಿಸ್ಥಿತಿಯಲ್ಲಿ ನಾವು ನೀವು.

ಸರಳತೆಯಿಂದ ಸಂಕೀರ್ಣ ಬದುಕಿನತ್ತ ಸಾಗಿದ ನಾವು ಈಗ ಮತ್ತೆ ಸಂಕೀರ್ಣತೆಯಿಂದ ಸರಳತೆಯತ್ತ ಸಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಎಲ್ಲವೂ ಇದ್ದು ಏನೂ ಇಲ್ಲದ ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ ನಮ್ಮ ಸಮಾಜ........ ಲೇಖನ: ವಿವೇಕಾನಂದ. ಎಚ್. ಕೆ. 9844013068......
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ