ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಮಂಡ್ಯ ಜಿಲ್ಲಾ ನೂತನ ಅಧ್ಯಕ್ಷರನ್ನಾಗಿ ಸಿದ್ದರಾಜು ಬಿ. ಎನ್. ಇವರನ್ನು ರಾಜ್ಯ ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ.
ಸಂಘಟನೆಯ ತತ್ವ ಮತ್ತು ಸಿದ್ಧಾಂತಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಜನಪರ ಹೋರಾಟಗಳು, ವಿದ್ಯಾರ್ಥಿಗಳ ಹಕ್ಕುಗಳು ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಧ್ವನಿ ಎತ್ತುವ ಮೂಲಕ ಸಮಾಜದಲ್ಲಿ ಮಾದರಿ ಸಂಘಟನೆಯಾಗಿ ಬೆಳೆಸಬೇಕು ಎಂದು ರಾಜ್ಯಾಧ್ಯಕ್ಷರಾದ ಕೆ. ರಾಮಚಂದ್ರಪ್ಪ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಶುಭ ಹಾರೈಸಿದ್ದಾರೆ.



