Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೇಷ್ಠ ಸಂವಿಧಾನ ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್: ನಿಸರ್ಗ ನಾರಾಯಣಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕನಲ್ಲ, ದೇಶಕ್ಕೆ ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತೂಬಗೆರೆಯ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಆಯೋಜಿಸಲಾದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶೋಷಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾನ ಅವಕಾಶಗಳನ್ನು ಕಲ್ಪಿಸುವ ದೃಢಸಂಕಲ್ಪ ಅಂಬೇಡ್ಕರ್ ಅವರದ್ದಾಗಿತ್ತು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ವಿಸ್ತರಣೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾಗಿದೆಎಂದು ಅವರು ತಿಳಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ ಹನ್ನೆರಡನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ, ಅಲ್ಲಮಪ್ರಭು ಅವರ ಮುಂದಾಳತ್ವದಲ್ಲಿ ಸಮಾಜದ ಜಾತೀಯತೆ, ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಲು ಶ್ರಮಿಸಿದರಾದರು ಅದೂ ಪೂರ್ಣ ಪ್ರಮಾಣದಲ್ಲಿ ಹೋಗಲಾಡಿಸಲು ಸಾಧ್ಯವಾಗಿರಲಿಲ್ಲ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಇದನ್ನೆಲ್ಲವನ್ನು ಹೋಗಲಾಡಿಸಲು ಪ್ರಯತ್ನ ಪಟ್ಟರು. ದೇಶದ‌ ಪ್ರತಿ ಪ್ರಜೆ ಗೌರವ ಮತ್ತು ಸ್ವಾಭಿಮಾನದಿಂದ ಬದುಕಬೇಕು. ಸಮ ಸಮಾಜ ನಿರ್ಮಾಣ‌ಮಾಡಬೇಕು ಎಂಬುದು ಅವರ ಮಹಾದಾಸೆಯಾಗಿತ್ತು ಎಂದರು.

ಕಾರ್ಯಕ್ರಮದ ಅಂಗವಾಗಿ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಬುದ್ಧ ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಮುನಿರಾಜು, ಗೌರವಾಧ್ಯಕ್ಷ ತೂಬಗೆರೆ ನಾಗರಾಜು, ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜು, ತಾಲ್ಲೂಕು ಸೊಸೈಟಿ ನಿರ್ದೇಶಕ ಪುರುಷೋತ್ತಮ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಮುಖಂಡರಾದ ಗೌರೀಶ್, ಅಶೋಕ್, ಮುರುಳಿ, ಯುವ ಮುಖಂಡ ಉದಯ ಆರಾಧ್ಯ ಹಾಗೂ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳಾದ ಗಿರಿಯಪ್ಪ, ಮುನಿರಾಜು, ಮೂರ್ತಿ, ಚಂದ್ರು, ಸುರೇಶ್ ಪ್ರಭು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ