Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಬೇಡ್ಕರ್ ಸೇವಾ ಸಮಿತಿ ಯುವ ಘಟಕದ ಅಧ್ಯಕ್ಷ ಸಂತೋಷ್ ಆಯ್ಕೆ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ (ASSK) ಸಂಘಟನೆಯ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಸಂತೋಷ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ಸ್ಥಾಪಕ ಅಧ್ಯಕ್ಷ ಸಂದೇಶ್ ರವರು  ತಿಳಿಸಿದ್ದಾರೆ.

   ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಮ್ಮ ಸಂಘಟನೆ ಅರುಣ್ ಕುಮಾರ್ ನೇತೃತ್ವದಲ್ಲಿ ಉತ್ತಮ ಸಂಘಟನೆಯಾಗಿ ಹೊರ ಹೊಮ್ಮಿದೆ. ಸಂಘಟನೆಯಲ್ಲಿ ಯುವಕರು ಹೆಚ್ಚಾಗಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಮಾರ್ಗದರ್ಶನದಲ್ಲಿ  ತಾಲೂಕಿನಲ್ಲಿ ಯುವ ಘಟಕ ರಚಣೆಯಾಗಿದ್ದು ಸಾಮಾಜಿಕ ಸೇವೆ ಹಾಗೂ ದಲಿತ ಪ್ರಗತಿ ಚಿಂತನೆಯ ಯುವ ಮುಖಂಡ ಸಂತೋಷ್ ರನ್ನು ತಾಲೂಕು ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Advertisement

     ಯುವ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಸಂತೋಷ್ ಪತ್ರಿಕೆಯೊಂದಿಗೆ ಮಾತನಾಡಿ ಅಂಬೇಡ್ಕರ್ ಸೇವಾ ಸಮಿತಿ ಸಾಮಾಜಿಕ ಚಿಂತನೆ ಹಾಗೂ ದಲಿತ ಪರ ಸಂಘಟನೆಯಾಗಿದ್ದು ನನ್ನನ್ನು ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಇದಕ್ಕಾಗಿ ಸಂಸ್ಥಾಪಕ ಅಧ್ಯಕ್ಷ ಸಂದೇಶ್, ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ರವರಿಗೆ ಅಭಾರಿಯಾಗಿದ್ದೇನೆ. ಅವರ ಆಶಯದಂತೆ ಮುಂಬರುವ ದಿನಗಳಲ್ಲಿ ಯುವಕರನ್ನು ಸಂಘಟಿಸಿ ತಾಲ್ಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

     ಯುವ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು