Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಶುಕ್ರವಾರ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದು ಸಿಎಂ ಸ್ಮರಿಸಿದರು.

ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ  ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು ಎಂದು ಅವರು ತಿಳಿಸಿದರು.

ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.

ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ. ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾತಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನದುದ್ದಕ್ಕೂ ಸಾರಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ  ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ  ರೀತಿಯಲ್ಲಿ ಸಂವಿಧಾನದಲ್ಲಿರುವಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಸಿಎಂ ತಿಳಿಸಿದರು.

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ