Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಸಾಮಾಜಿಕ ಸುಧಾರಣೆಗೆ ಅಂಬೇಡ್ಕರ್ ಪಾತ್ರ ಅಪಾರ-ನರಸಿಂಹಮೂರ್ತಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತವಾದರೆ
ಚಿಕ್ಕ ಸಂವಿಧಾನವನ್ನು ಅಮೇರಿಕ ಹೊಂದಿದೆ ಎಂದು ಬೆಂಗಳೂರಿನ ಆದರ್ಶ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎನ್.ನರಸಿಂಹಮೂರ್ತಿ ತಿಳಿಸಿದರು.

 ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದಲ್ಲಿರುವ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 ಭಾರತದ ಸಂವಿಧಾನ ರೂಪಿಸುವ ಜವಾಬ್ಧಾರಿಯನ್ನು ಹೊತ್ತು ಅಪಾರವಾದ ಶ್ರಮವಹಿಸಿದ ಡಾ.ಬಿ.ಆರ್. ಅಂಬೇಡ್ಕರ್, ಭಾರತದ  ಸಾಮಾಜಿಕ ಸುಧಾರಣೆಗಾಗಿ ನಿರಂತರ ಹೋರಾಟ ನಡೆಸಿದರು. 

ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿದ್ದ ಅಂಬೇಡ್ಕರ್  ಅವರಿಗೆ ಸಮಸಮಾಜ ನಿರ್ಮಾಣ ಮಾಡುವುದು ಮುಖ್ಯ ಗುರಿಯಾಗಿತ್ತು ಎಂದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಶಂಕರ್ ಮಾತನಾಡಿ, ವಿದ್ಯೆಯ ಮಹತ್ವವ ಅರಿತಿದ್ದ  ಡಾ.ಬಿ.ಅರ್.ಅಂಬೇಡ್ಕರ್ ಅವರುಅನಕ್ಷರತೆ ಮತ್ತು ಅಜ್ಞಾನವನ್ನು ಮುಕ್ತಗೊಳಿಸಲು ಶಿಕ್ಷಣ ಅತಿ ಅಗತ್ಯವೆಂದರು. 

ಶಿಕ್ಷಣದಿಂದ ಮಾತ್ರ ಶೋಷಣೆಗೆ ಒಳಗಾದವರನ್ನು ಸಾಮಾಜಿಕ ಅನ್ಯಾಯದಿಂದ ಮುಕ್ತ ಗೊಳಿಸಲು ಸಾಧ್ಯವಾಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಪಡೆಯಲು ಜನರಿಗೆ ಶಿಕ್ಷಣ  ಸಹಕಾರಿ ಆಗುತ್ತದೆ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ ಎಂದರು.

ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಮಾತನಾಡಿ, ಬುದ್ಧ, ಬಸವಣ್ಣ ಅವರ ಆಶಯದಂತೆ ತಾರತಮ್ಯಗಳಿಂದ ಮುಕ್ತವಾದ ಸಮಾಜ ಸ್ಥಾಪಿಸುವುದು ಡಾ. ಅಂಬೇಡ್ಕರ್  ಅವರ ಗುರಿ ಯಾಗಿತ್ತು. ಸಮಾಜದಲ್ಲಿರುವ ಶೋಷಣೆ, ದಬ್ಬಾಳಿಕೆ ಮತ್ತು ತಾರತಮ್ಯದ ವಿರುದ್ಧ ಹೋರಾಟ ನಿರಂತರವಾಗಿತ್ತು. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರಜಾಪ್ರಭುತ್ವ, ಸಮಾನತೆ ಮತ್ತು ನ್ಯಾಯದ ಪರವಾದ ವಿಚಾರಗಳನ್ನು ಸೇರಿಸಿದರು. ಇದ್ದರಿಂದಾಗಿ ವಿಶ್ವದಲ್ಲಿ ನಮ್ಮ ಭಾರತ ಸಂವಿಧಾನಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ದೊರಕಿದೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳ ವಿತರಣೆ ಮಾಡಲಾಯಿತು.

   ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್, ಹಣಬೆ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ಓ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಕಲಾವಿದ ದರ್ಗಾ ಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು