Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗಡಿ ಸವಾಲುಗಳ ನಡುವೆ ಸೌಹಾರ್ದತೆ, ಸಂಸ್ಕೃತಿ ರಕ್ಷಣೆಗೆ ಚಿಂತಕರ ಕರೆ

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಗಡಿ ಭಾಗದಲ್ಲಿ ಸವಾಲುಗಳು ನಿರಂತರವಾಗಿದ್ದು
, ಗಡಿನಾಡ ಜನರು ಅತ್ಯಂತ ಸೂಕ್ಷ್ಮತೆಯಿಂದ, ಸಂವೇದನಾಶೀಲರಾಗಿ ಪ್ರೀತಿ, ವಿಶ್ವಾಸ ಹಾಗೂ ಸಹೋದರತೆಯಿಂದ ಬದುಕಿ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಘರ್ಷಣೆಗೆ ಅವಕಾಶ ನೀಡಬಾರದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ರಂಗದೀವಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪುಣಜನೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗಡಿನಾಡ ಸಾಂಸ್ಕೃತಿಕ ಉತ್ಸವದ ವಿಚಾರ ಸಂಕಿರಣದಲ್ಲಿ 'ಗಡಿ ಪ್ರದೇಶದ ಸವಾಲುಗಳು ಮತ್ತು ಸಾಂಸ್ಕೃತಿಕ ಅನನ್ಯತೆ' ವಿಷಯದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

Advertisement

ಪ್ರೀತಿ-ವಿಶ್ವಾಸದಿಂದ ಸಮಸ್ಯೆಗಳಿಗೆ ಪರಿಹಾರ:
ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಮಾತನಾಡಿ
, "ಚಾಮರಾಜನಗರ ಜಿಲ್ಲೆಯು ತಮಿಳುನಾಡು ಮತ್ತು ಕೇರಳದ ಸರಹದ್ದಿನಲ್ಲಿದ್ದು, ಇಲ್ಲಿ ಶಿಕ್ಷಣ, ಉದ್ಯೋಗ, ಭೂಮಿ ಹಾಗೂ ಅಭಿವೃದ್ಧಿಯಂತಹ ನಿರಂತರ ಸಮಸ್ಯೆಗಳಿವೆ. ಪರಸ್ಪರ ಸಹಕಾರ, ಪ್ರೀತಿ ಹಾಗೂ ನಂಬಿಕೆಯಿಂದ ಬದುಕಿದಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ. ಸಾಂಸ್ಕೃತಿಕ ಭಿನ್ನತೆಯ ನಡುವೆಯೂ ಸಮನ್ವಯತೆ ಕಾಯ್ದುಕೊಂಡು, ಕಲೆ, ಸಾಹಿತ್ಯ, ಸಂಗೀತ, ಜನಪದ ಹಾಗೂ ನೃತ್ಯ ಪರಂಪರೆಯನ್ನು ಉಳಿಸುವ ಮೂಲಕ ಕನ್ನಡಿಗರ ಅಭಿವೃದ್ಧಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ," ಎಂದರು.

ಗಡಿ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ:
ವಿಚಾರ ಮಂಡನೆ ಮಾಡಿದ ನಂಜನಗೂಡು ಜೆಎಸ್‌ಎಸ್ ಕಾಲೇಜಿನ ಪ್ರಾಚಾರ್ಯ ಹಾಗೂ ಸಾಹಿತಿ ಕೊತ್ತಲವಾಡಿ ಶಿವಕುಮಾರ್
, "ಗಡಿ ಭಾಗದಲ್ಲಿ ಭಾಷೆ, ವೈದ್ಯಕೀಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಸವಾಲುಗಳಿವೆ. ಸರ್ಕಾರವು ಗಡಿಭಾಗದ ಗ್ರಾಮೀಣ ಜನರಿಗೆ ವಿಶೇಷ ಅರಿವು ಮೂಡಿಸಿ, ಸರಳ ಕಾನೂನುಗಳ ಮೂಲಕ ಅಭಿವೃದ್ಧಿಪಡಿಸಬೇಕು. ಇಂತಹ ಸಾಂಸ್ಕೃತಿಕ ಉತ್ಸವಗಳು ಗಡಿ ಜನರಲ್ಲಿ ಸ್ಪೂರ್ತಿ ತುಂಬಲಿದ್ದು, 'ಕನ್ನಡಿಗರು ನಮ್ಮೊಂದಿಗಿದ್ದಾರೆ' ಎಂಬ ಭಾವನೆ ಮೂಡಿಸುತ್ತವೆ," ಎಂದು ಅಭಿಪ್ರಾಯಪಟ್ಟರು.

ಅರಣ್ಯ ಹಕ್ಕು ಪತ್ರ ನೀಡಿ - ಮಾನವ-ಪ್ರಾಣಿ ಸಂಘರ್ಷ ತಡೆಯಿರಿ:
ಗಡಿ ಭಾಗದ ಹೋರಾಟಗಾರ ಹಾಗೂ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಮಾತನಾಡಿ
, "ಗಡಿ ಭಾಗದಲ್ಲಿ ಸಾವಿರಾರು ಎಕರೆ ಭೂಮಿ ಅರಣ್ಯ ವ್ಯಾಪ್ತಿಯಲ್ಲಿದ್ದು, ಅಲ್ಲಿನ ನಿವಾಸಿಗಳಿಗೆ ತಕ್ಷಣವೇ ಹಕ್ಕು ಪತ್ರಗಳನ್ನು ನೀಡಿ ನೆಮ್ಮದಿಯ ಬದುಕಿಗೆ ಅನುವು ಮಾಡಿಕೊಡಬೇಕು. ಅರಣ್ಯದಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷವನ್ನು ಕೊನೆಗೊಳಿಸುವ ದಿಕ್ಕಿನಲ್ಲಿ ಎರಡೂ ರಾಜ್ಯಗಳ ಸರ್ಕಾರಗಳು ಚಿಂತಿಸಬೇಕು. ಜನರಿಗೆ ಶಾಶ್ವತ ಹಕ್ಕು ಪತ್ರ ನೀಡಿದಾಗ ಮಾತ್ರ ಇಂತಹ ಸಾಂಸ್ಕೃತಿಕ ಉತ್ಸವಗಳಿಗೆ ನಿಜವಾದ ಅರ್ಥ ಸಿಗುತ್ತದೆ," ಎಂದು ಆಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ರಂಗದೀವಿಗೆ ಸಂಸ್ಥೆಯ ಅಧ್ಯಕ್ಷರಾದ ಕಲೆ ನಟರಾಜು, ರಂಗನಾಥ್ ಹಾಗೂ ರಂಗಭೂಮಿ ಕಲಾವಿದ ಶಿವಶಂಕರ್ ಚಟ್ಟು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು