Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗಮಣಿ ಎಸ್ ರಾವ್ ಅವರಿಗೆ ಅಮೃತ ಬೀಜ ಪುಸ್ತಕ ಅರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರದೇಶ ಸಮಾಚಾರ ಓದುತ್ತಿರುವವರು ನಾಗಮಣಿ ಎಸ್ ರಾವ್.... ಎನ್ನುವ ಧ್ವನಿ ಒಂದು ಕಾಲಘಟ್ಟದಲ್ಲಿ ಜನಪ್ರಿಯ, ಇಂದಿಗೂ ಚಿರಪರಿಚಿತ. ನಾಗಮಣಿ ಅವರು 1961-62ರಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಲ್ಲಿಸಿದ್ದರು.

ಕೆ ಜಿ ರಸ್ತೆಯಲ್ಲಿ ಕಲ್ಲಿನ ಕಟ್ಟಡದಲ್ಲಿದ್ದ ಕೆಯುಡಬ್ಲೂಜೆಗೆ ಅಂದು ಇಂದಿರಾಗಾಂಧಿ ಭೇಟಿ ನೀಡಿದಾಗ ಹಾರ ಹಾಕಿ ಸ್ವಾಗತಿಸಿದ್ದು ಇದೇ ನಾಗಮಣಿ ಎಸ್ ರಾವ್ ಅವರು ಎನ್ನುವುದು ಅಭಿಮಾನದ ಸಂಗತಿ. ಕೆಯುಬ್ಲೂಜೆಯ ಮನೆಯಂಗಳದಲ್ಲಿ... ಕಾರ್ಯಕ್ರಮದಲ್ಲಿ ಅವರನ್ನು ಗೌರವಿಸಲಾಗಿತ್ತು.

ಬಿಎಂಶ್ರೀ ಪ್ರತಿಷ್ಠಾನದಲ್ಲಿ ಏರ್ಪಡಿಸಿದ್ದ ಅವರದ್ದೇ ಆತ್ಮಕಥನ ಕೃತಿ ಬಿಡುಗಡೆ ಸಮಾರಂಭದಲ್ಲಿ ನಾಗಮಣಿ ಎಸ್ ರಾವ್ ಅವರನ್ನು ಕೆಯುಡಬ್ಲೂಜೆ ವತಿಯಿಂದ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದಿಸಿ, ಅಮೃತ ಬೀಜ ಪುಸ್ತಕವನ್ನು ನೀಡಿದರು. ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ರಾಜ್ಯ ಸಮಿತಿಯ ದೇವರಾಜು ಮತ್ತಿತರರು ಇದ್ದರು.

ಮಾಧ್ಯಮ ಅಕಾಡೆಮಿಯಿಂದ ಸನ್ಮಾನ:
ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ವತಿಯಿಂದ ಅಕಾಡೆಮಿ ಅಧ್ಯಕ್ಷೆ ಆಯೇಷಖಾನಂ ಅವರು ನಾಗಮಣಿ ಎಸ್ ರಾವ್ ಅವರನ್ನು ಸನ್ಮಾನಿಸಿದರು. ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ಎಸ್.ಕೆ.ಶೇಷಚಂದ್ರಿಕಾ, ಕೆ.ಎಸ್.ರಾಜನ್, ಡಾ.ವಿಜಯಮ್ಮ, ಮಾಲತಿ ಭಟ್, ಸುಮತಿ,  ಶಶಿಕಲಾ ಮತ್ತಿತರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ