Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ವಿಕಲಚೇತನರ ಹಾಗೂ ಹಿರಿಯರ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ನೆಲಮಂಗಲದ ದೊಡ್ಡಬೆಲೆ ಮತ್ತು ಸೋಲದೇವನಹಳ್ಳಿ ಗ್ರಾಮ ಪಂಚಾಯಿತಿಗಳು, ಹೊಸಕೋಟೆ ಟೌನ್ ನಗರಸಭೆ-1 ಹುದ್ದೆ, ದೇವನಹಳ್ಳಿಯ ಅವತಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು (ಯು.ಡಿ.ಐ.ಡಿ ಲಗತ್ತಿಸಬೇಕು. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರದವರಿಗೆ ಆದ್ಯತೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು. 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ವಿಕಲಚೇತನರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ/

ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ / ಬಿಡುಗಡೆ ಮಾಡಬಹುದಾಗಿದೆ. ಗೌರವಧನ ಆಧಾರದ ಮೇಲೆ ಕೆಲಸ  ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ. ಸಮರ್ಥ ವಿಕಲಚೇತನರಾಗಿರಬೇಕು ತೀವ್ರತರ ವಿಕಲಚೇತನರಾಗಿರಬಾರದು. ಸಂಬಂಧಪಟ್ಟ ಪಂಚಾಯಿತಿ/ನಗರಸಭೆ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ಕಂದಾಯ ಇಲಾಖೆಯಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು. ಮಾಹೆಯಾನ ಗೌರವಧನ ರೂ.9,000 ನೀಡಲಾಗುವುದು.

ಆಸಕ್ತ ವಿಕಲಚೇತನ ಸಮರ್ಥ ವ್ಯಕ್ತಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15 ರೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 03, ನೆಲಮಹಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ದೃಢೀಕೃತ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ