Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕಿಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು.

ಯೂನಿಯನ್ ಪಾರ್ಕ್‌ನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

Advertisement

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಎಲ್‌ಓ. ಜವಾಬ್ದಾರಿಯನ್ನು ವಹಿಸುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಕನಿಷ್ಟ ವೇತನ ಜಾರಿಗಾಗಿ ಅನೇಕ ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಖಾನಾಪುರಕ್ಕೆ ಆಗಮಿಸಿದ್ದ ರಾಹುಲ್‌ಗಾಂಧಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದರೂ ಇದುವರೆವಿಗೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳಿಗೆ ದಿನಕ್ಕೆ ನಾಲ್ಕು ನೂರರಿಂದ ಐದು ನೂರು ರೂ. ಕೂಲಿ ಸಿಗುತ್ತಿದೆ. ತಾಯಿ ಮತ್ತು ಮಕ್ಕಳ ಪಾಲನೆಯಲ್ಲೇ ಜೀವನ ಕಳೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ತಿಂಗಳಿಗೆ ೧೨ ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಕನಿಷ್ಟ ೨೧ ಸಾವಿರ ರೂ.ಗಳ ವೇತನ ನೀಡಿ ಜೀವನ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.

೨೫ ವರ್ಷಗಳಿಂದಲೂ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಿರಿಯ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ಬಾಕಿಯಿರುವ ವೇತನವನ್ನು ಕೂಡಲೆ ಬಿಡುಗಡೆಗೊಳಿಸಿ ವೇತನ ಹೆಚ್ಚಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾದಾಗ ಬಿಸಿಯೂಟ ತಯಾರಕರನ್ನು ಅಡುಗೆ ಕೆಲಸದಿಂದ ಬಿಡುಗಡೆಗೊಳಿಸಿದಲ್ಲಿ ಇಡಿಗಂಟು ನೀಡಬೇಕು. ಬಿಸಿಯೂಟ ತಯಾರಕರನ್ನು ಸ್ಕೀಮ್ ವರ್ಕರ್ಸ್ ಎನ್ನುವುದನ್ನು ಬದಲಾಯಿಸಿ ಕಾರ್ಮಿಕರೆಂದು ಘೋಷಿಸಬೇಕು. ನಿವೃತ್ತಿಯಾದ ಬಿಸಿಯೂಟ ತಯಾರಕರಿಗೆ ಪಿಂಚಣಿ ಕೊಡದಿರುವುದರಿಂದ ೪೦ ಸಾವಿರ ರೂ. ಇಡಿಗಂಟು ಬದಲಿಗೆ ಎರಡು ಲಕ್ಷ ರೂಪಾಯಿಗಳನ್ನು ಕೊಡಬೇಕು. ಮೊಟ್ಟೆ ಸುಲಿಯುವ ಭತ್ಯೆಯನ್ನು ಪ್ರತಿ ಮೊಟ್ಟೆಗೆ ಒಂದು ರೂ. ನೀಡಬೇಕೆಂದು ಆಗ್ರಹಿಸಿದರು.

ಕಾಂ.ಎಸ್.ಭಾಗ್ಯಮ್ಮ, ಕಾಂ.ಸಾವಿತ್ರಮ್ಮ, ಕಾಂ.ಟಿ.ಆರ್.ಉಮಾಪತಿ, ಕಾಂ.ರಾಧಮ್ಮ, ಕಾಂ.ವಿನೋಧಮ್ಮ, ಕಾಂ.ಪರ್ವಿನ್‌ಭಾನು, ಕಾಂ.ಕಾಂತಮ್ಮ, ಕಾಂ.ರಜಿಯಾ, ಕಾಂ.ನಾಗಮ್ಮ, ಕಾಂ.ಗಿರಿಜಮ್ಮ, ಕಾಂ.ತಿಪ್ಪಮ್ಮ, ಕಾಂ.ಈ.ಸತ್ಯಕೀರ್ತಿ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು