Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ನೌಕರರ ಮುಷ್ಕರ ಫೆಬ್ರವರಿ 12ರಂದು

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಹಿರಿಯೂರು ಶಾಖೆ ವತಿಯಿಂದ ಫೆಬ್ರವರಿ 12ರಂದು ಅಂಗನವಾಡಿ ನೌಕರರ ಮುಷ್ಕರ ಮಾಡುವುದಾಗಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸುವುದಾಗಿ ಮನವಿ ಸಲ್ಲಿಸಿದರು.

 ಶಿಕ್ಷಣ ಇಲಾಖೆ ಎಲ್ ಕೆಜಿ-ಯುಕೆಜಿ ನಡೆಸುವುದನ್ನು ನಿಲ್ಲಿಸಿ, ಅಂಗನವಾಡಿ ಕೇಂದ್ರಗಳಲ್ಲಿಯೇ ನಡೆಸಬೇಕು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಹಿರಿಯೂರು ತಾಲ್ಲೂಕು ವತಿಯಿಂದ ಮುಷ್ಕರದಲ್ಲಿ ಪಾಲ್ಕೊಳ್ಳುವುದು ಎಂದು ಅಧ್ಯಕ್ಷೆ ಬಿಪಿ ನಿರ್ಮಲ ದೇವರಾಜ್ ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಆಗತ್ಯವಿರುವ ಬಜೆಟ್ ಕೊಡಬೇಕು. ಅಂಗನವಾಡಿ ನೌಕರರಿಗೆ ದ್ರೋಹ ಬಗೆದ 4 ಕಾರ್ಮಿಕ ಸಂಹಿತೆಗಳು ರದ್ದಾಗಲಿ ಎಂದು ಅವರು ಒತ್ತಾಯಿಸಿದರು.

ಶಾಸನಬದ್ಧ ಸವಲತ್ತುಗಳನ್ನು ನೀಡದ "ಶ್ರಮಶಕ್ತಿ ನೀತಿ" 2025 ಬೇಡವೇ ಬೇಡ. ಅಂಗನವಾಡಿ ನೌಕರರಿಗೂ ಮುಟ್ಟಿನ ರಜೆ ನೀಡಬೇಕು. 56 ಲಕ್ಷ ಸ್ತ್ರೀ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಿ. ICDS ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸಬೇಕು. 2018 ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಳ ಮಾಡಿಲ್ಲ. ಕೂಡಲೇ ಘಟಕ ವೆಚ್ಚ ಹೆಚ್ಚಳ ಮಾಡಬೇಕು ಮತ್ತು ಸ್ಥಳೀಯ ಆಹಾರ-ಪದಾರ್ಥಗಳನ್ನು ನೀಡಬೇಕು.

2018 ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2700 ರೂ., ಸಹಾಯಕಿಗೆ 1350 ರೂ.ಗಳನ್ನು ಮಾತ್ರವೇ ನೀಡುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು.

 FRS ನ್ನು ರದ್ದು ಮಾಡಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ನೀಡಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ಬಿಡುಗಡೆಗೊಳಿಸಬೇಕು. ಚುನಾವಣಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತರ ಮೇಲೆ ಶಿಸ್ತುಕ್ರಮ ಜರುಗಿಸಬಾರದು. ಖಾಸಗಿ ವಿಚಾರಗಳಲ್ಲಿ ಅಂಗನವಾಡಿ ನೌಕರರ ಬಂದನವಾದಾಗ ವಿಚಾರಣೆ ನಡೆಸದೆ ಏಕಮುಖವಾಗಿ ಕೆಲಸದಿಂದ ವಜಾ ಮಾಡುವುದನ್ನು ನಿಲ್ಲಿಸಬೇಕು.


ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ಅಂಗನವಾಡಿ ನೌಕರರನ್ನು ಖಾಯಂ ಮಾಡುವ ತನಕ 26 ಸಾವಿರ ಕನಿಷ್ಠ ವೇತನ ಹೆಚ್ಚಿಸಬೇಕು. ಈ ಮೇಲಿನ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಫೆಬ್ರವರಿ 12 ರಂದು ಒಂದು ದಿನ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಹಿರಿಯೂರು ತಾಲ್ಲೂಕು ಗೌರವಾಧ್ಯಕ್ಷೆ ಅನುಸೂಯಮ್ಮ ,ಅಧ್ಯಕ್ಷೆ ಬಿ.ಪಿ.ನಿರ್ಮಲ ದೇವರಾಜ್, ಉಪಾಧ್ಯಕ್ಷೆ ಸಿ.ಜಯಮ್ಮೆ ಖಜಾಂಚಿ  ಎಸ್.ಕವಿತೆ ಪ್ರಧಾನ ಕಾರ್ಯದರ್ಶಿ ಜೆ. ಕೀಷ್ಟಿ  ಜುನೇಟಾ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ