Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರು ಅತಿ ಹೆಚ್ಚು ಮೆಕ್ಕೆಜೋಳ ಖರೀದಿಸಬೇಕು-ಜಿಲ್ಲಾಧಿಕಾರಿ ವೆಂಕಟೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನಿಷ್ಟ ಬೆಂಬಲ ಬೆಲೆಯಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರು ರೈತರಿಂದ ಗರಿಷ್ಟ ಪ್ರಮಾಣದಲ್ಲಿ ಮೆಕ್ಕೆಜೋಳ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. 


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕುಕ್ಕುಟ ಹಾಗೂ ಪಶು ಆಹಾರ ಉತ್ಪಾದನಾ ಘಟಕಗಳಿಗೆ ಅವಶ್ಯವಿರುವ ಪ್ರಮಾಣದ ಮೆಕ್ಕೆಜೋಳವನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್‍ಪಿ) ರೈತರಿಂದ ಖರೀದಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಕ್ಕುಟ ಹಾಗೂ ಪಶು ಆಹಾರ ಉತ್ಪದನಾ ಘಟಕಗಳ ವಾರ್ಷಿಕ ಆಹಾರ ಉತ್ಪಾದನೆ, ಮೆಕ್ಕೆಜೋಳ ಸಂಗ್ರಹ ಸಾಮಾಥ್ರ್ಯದ ಮಾಹಿತಿಯನ್ನು ಸಂಗ್ರಹಿಸಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಮೂಲಕ ನೇರವಾಗಿ ರೈತರಿಂದ ಗುಣಮಟ್ಟದ ಮೆಕ್ಕೆಜೋಳ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಗ್ರಹ ಸಾಮಾರ್ಥ್ಯದ ವರದಿ ನಂತರ ಖರೀದಿ ಕೇಂದ್ರ ಸ್ಥಾಪನೆ: ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ಸಂಸ್ಥೆಗಳಿಗೆ ಅವಶ್ಯವಿರುವ ಪ್ರಮಾಣದ ಮೆಕ್ಕೆಜೋಳ ಖರೀದಿ ಮಾಡುವ ಸಂಬಂಧ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನಲ್ಲಿರುವ ವಿವಿಧ ಘಟಕಗಳಿಗೆ ತಹಶೀಲ್ದಾರ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರನ್ನು ಒಳಗೊಂಡ ತಂಡ ಭೇಟಿ ನೀಡಿ ಪರಿಶೀಲಿಸಿ, ಘಟಕಗಳ ಸಂಗ್ರಹಣಾ ಸಾಮಥ್ರ್ಯದ ಬಗ್ಗೆ ವರದಿ ನೀಡಿದ ನಂತರ ಖರೀದಿ ಕೇಂದ್ರಗಳ ಸ್ಥಾಪನೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಅವಧಿಯಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯು ರೈತರಿಂದ ಖರೀದಿ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರಂತೆ ಅನುಸರಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ಬಸವೇಶ್, ಪಶು ಆಹಾರ ಉತ್ಪಾದನಾ ಘಟಕಗಳ ಪ್ರತಿನಿಧಿಗಳು, ಟಿಎಪಿಸಿಎಂಎಸ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳು, ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ