ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಮಜರಾ ಹೊಸಹಳ್ಳಿ ತಾಂಡ (ದಿನ್ನೆ ತಾಂಡ) ಗ್ರಾಮದ ಕಾಂಗ್ರೇಸ್ ಕಾರ್ಯಕರ್ತ ಅಂಜನ್ ಕುಮಾರ್ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರ ಅನುಮೋದನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿ.ಆರ್. ಗೌಡ ಅದೇಶಿಸಿದ್ದಾರೆ.
ಗ್ರಾಮೀಣ ಬಾಗದ ಕಾಂಗ್ರೇಸ್ ಪಕ್ಷ ಸಂಘಟನೆ ಬಲವರ್ಧನೆಗೆ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಬಲವರ್ಧನೆಗೆ ತಳಮಟ್ಟದ ಕಾರ್ಯಕರ್ತರನ್ನು ಸಜ್ಜುಗೊಳಿಸುವುದು ಅತಿ ಮುಖ್ಯ.
ಇದಕ್ಕಾಗಿ ಬೂತ್ ಮಟ್ಟದಿಂದ ಹಿಡಿದು ಗ್ರಾಮ, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯತಂತ್ರ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ನಿರಂತರ ಜನ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಕೆಪಿಸಿಸಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಸಹಕರಿಸಿ, ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಅಯ್ಕೆ ಮಾಡಲಾಗಿದೆ ಎಂದು ಸಿ ಆರ್ ಗೌಡ ರವರು ಮಾಹಿತಿ ನೀಡಿದ್ದಾರೆ.



