Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ವಿರುದ್ಧ ಮತ್ತೊಂದು ಮುಡಾ ಸಂಕಷ್ಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್​ಚಿಟ್ ನೀಡಿದ್ದಾರೆ. ಆದರೆ
, ಮುಡಾಕ್ಕೆ ಸಂಬಂಧಿಸಿದ ಮತ್ತೊಂದು ಹಗರಣದಲ್ಲಿ ಈಗ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಎನ್.​ಆರ್ ರಮೇಶ್ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು ರಾಜ್ಯಪಾಲರು ಅನುಮತಿ ನೀಡಿದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ.

ಏನಿದು ಹೊಸ ಪ್ರಕರಣ?-
ಮೈಸೂರಿನ ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣ ಮಾಡುವುದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರಿನ ಹಿಣಕಲ್ ಗ್ರಾಮದ ಸರ್ವೆ ನಂಬರ್
70/4 ಎ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಭೂಮಿಯನ್ನು ಡಿ ನೋಟಿಫಿಕೇಶನ್ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಉಲ್ಲಂಘಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿರುವುದರ ವಿರುದ್ಧ ರಾಜ್ಯಪಾಲರಿಗೆ ರಮೇಶ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಡಾವು 1985ರಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದ ಮೂಲ ಮಾಲೀಕರಿಗೆ ಹಣ ನೀಡಿತ್ತು. ಪ್ಲಾಟ್ ನಂ 3161 ಸೇರಿದಂತೆ ಕಾನೂನಿನ ಪ್ರಕಾರ ಸ್ವಾಧೀನಪಡಿಸಿಕೊಂಡ ಭೂಮಿಯಿಂದ ವಿವಿಧ ಅರ್ಜಿದಾರರಿಗೆ ಮುಡಾ ನಿಗದಿಪಡಿಸಿದ ಪ್ಲಾಟ್‌ಗಳನ್ನು ಸುಂದರ್ ರಾಜ್ ಎಂಬವರಿಗೆ ನೀಡಿತ್ತು. ಅವರು ಅನುಮೋದನೆಗಳನ್ನು ಪಡೆದ ನಂತರ ಮನೆ ನಿರ್ಮಿಸಿದ್ದರು.
ಆದರೂ
, ಅವರ ಮನೆಯನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಲಾಯಿತು. ಇದು ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸರಿಯಾದ ಪ್ರಕ್ರಿಯೆಯ ಬಗ್ಗೆ ಗಂಭೀರ ಕಳವಳ ಮೂಡಿಸಿತ್ತು ಎಂದು ಎನ್​.ಆರ್ ರಮೇಶ್ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಧಿಸೂಚನೆಯ ವಿರುದ್ಧದ ಸ್ಪಷ್ಟ ತೀರ್ಪಿನ ಹೊರತಾಗಿಯೂ, 23/10/1997 ರಂದು, ಅಂದಿನ ಮುಡಾ ಅಧ್ಯಕ್ಷ ಸಿ. ಬಸವೇಗೌಡ ಅವರು ರಾಜ್ಯ ಸರ್ಕಾರದ ಅನುಮೋದನೆಯಿಲ್ಲದೆ, ಎಲ್ಲಾ ಶಾಸನಬದ್ಧ ಮಾನದಂಡಗಳನ್ನು ಉಲ್ಲಂಘಿಸಿ ಸರ್ವೇ ನಂಬರ್ 70/4 ಎ ಗಾಗಿ ಅಕ್ರಮ ಡಿ-ನೋಟಿಫಿಕೇಶನ್ ಆದೇಶ ನೀಡಿದ್ದರು ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಆರೋಪವೇನು?
ಈ ಡಿನೋಟಿಫಿಕೇಶನ್ ಆದ ಕೇವಲ 27 ದಿನಗಳ ನಂತರ, 26/11/1997 ರಂದು, ಆ ಸಮಯದಲ್ಲಿ ಉಪ ಮುಖ್ಯಮಂತ್ರಿ, ಹಣಕಾಸು ಸಚಿವ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿದ್ದರಾಮಯ್ಯ ಅವರು ಪ್ಲಾಟ್ ಸಂಖ್ಯೆ 3161 (80×120 ಅಡಿ, 9,600 ಚದರ ಅಡಿ) ಅನ್ನು ಸಂಕಮ್ಮ ಎಂಬವರಿಂದ 6.72 ಲಕ್ಷ ರೂ.ಗೆ ಖರೀದಿಸಿದ್ದರು. ಮುಡಾ ಕಾನೂನು ಬದ್ಧವಾಗಿ ಸ್ವಾಧೀನಪಡಿಸಿಕೊಂಡ 12 ವರ್ಷಗಳ ನಂತರ ಈ ವ್ಯವಹಾರ ನಡೆದಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರಷ್ಟೆ. ಅವರ ವಿರುದ್ಧ ತನಿಖೆಗೆ ಅನುಮತಿ ದೊರೆತಿಲ್ಲ. ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ