ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲಾ ಸದಸ್ಯರು ಈಗಾಗಲೇ ಇ-ಕೆವೈಸಿ ಮಾಡಿಸಿ 05 ವರ್ಷ ಪೂರೈಸಿದವರು ಮಾತ್ರ ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಇ-ಕೆವೈಸಿ (ಬಯೋ ದೃಢೀಕರಣ) ಮಾಡಿಸಿಕೊಳ್ಳಲು ತಿಳಿಸಿದೆ.
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡುವಾಗ ಇತ್ತೀಚಿನ ಜಾತಿ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ರೇಷನ್ ಕಾರ್ಡ್‍ನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.
ಇ-ಕೆವೈಸಿ ಮಾಡಿಸದೇ ಹೋದಲ್ಲಿ ಅಂತಹ ಪಡಿತರ ಚೀಟಿಯ ಫಲಾನುಭವಿಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ 2026ರ ಸೆಪ್ಟೆಂಬರ್ 01 ರಿಂದ 15 ರವರೆಗೆ ಇ-ಕೆವೈಸಿ ಕಾರ್ಯ ನಡೆಯಲಿದ್ದು, ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ ತಿಳಿಸಿದ್ದಾರೆ.




