Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತ್ಯೇಕ ಮತದಾನದ ಬೂತ್ ಸ್ಥಾಪಿಸುಲು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹೊಳಲ್ಕೆರೆ ತಾಲ್ಲೂಕು ಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ ಸ್ಥಾಪಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಬಿ.ದುರ್ಗ ಹೋಬಳಿಗೆ ಸೇರಿದ ಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಲಂಬಾಣಿ ಜನಾಂಗದವರೆ ಅಧಿಕವಾಗಿದ್ದು, ನೂರರಿಂದ ೧೨೦ ಮನೆಗಳಿದ್ದು, ಐದುನೂರರಿಂದ ೮೦೦ ರಷ್ಟು ಜನಸಂಖ್ಯೆಯಿದೆ. ತಾಂಡದಲ್ಲಿ ಪ್ರಾಥಮಿಕ ಶಾಲೆಯಿರುವುದರಿಂದ ಮಜುರೆ ಗ್ರಾಮವಾಗಿ ಪರಿಗಣಿಸಲಾಗಿದ್ದು, ಜನಸಂಖ್ಯೆ ಮತ್ತು ಮನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಗಂಜಿಗಟ್ಟೆ ಲಂಬಾಣಿ ತಾಂಡವನ್ನು ಕಂದಾಯ ಗ್ರಾಮವಾಗಿ ಪರಿಗಣಿಸಿ ಪ್ರತ್ಯೇಕ ಮತದಾನದ ಬೂತ್ ಸ್ಥಾಪಿಸುವಂತೆ ಒತ್ತಾಯಿಸಿದರು.

ಗಂಜಿಗಟ್ಟೆ ಲಂಬಾಣಿಹಟ್ಟಿ ಕುಗ್ರಾಮವಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಈ ಗ್ರಾಮದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ನಾಗರೀಕ ಮೂಲಭೂತ ಸೌಲಭ್ಯಗಳಿಂದ ದೂರ ಉಳಿದಿರುವ ಲಂಬಾಣಿಹಟ್ಟಿ ಗಣಿಬಾಧಿತ ಪ್ರದೇಶವಾಗಿದ್ದು, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಪ್ರತ್ಯೇಕ ಮತದಾನದ ಬೂತ್ ಸ್ಥಾಪಿಸಿ ಗಣಿಬಾಧಿತ ಪ್ರದೇಶಕ್ಕೆ ಒಳಪಡಿಸುವಂತೆ ಗಣಿಬಾಧಿತ ಸಮಿತಿ ಸಂಸ್ಥಾಪಕ ರಮೇಶ್ ಬಿ.ದುರ್ಗ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ರಮೇಶ್‌ನಾಯ್ಕ, ಗೋವರ್ಧನ್, ವೆಂಕಟೇಶ್, ಜಿ.ಸಿ.ತಿಪ್ಪೇಸ್ವಾಮಿ, ರಘು, ಉಮೇಶ್, ಶಿವನಾಯ್ಕ, ಯೋಗೇಶ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್, ತಿಪ್ಪೇಸ್ವಾಮಿ, ಶಿವಕುಮಾರ್, ಕೃಷ್ಣನಾಯ್ಕ, ಮಂಜುಳಬಾಯಿ, ಕರಿಬಸವ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!