Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರ ಆರೈಕೆದಾರರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸೆರಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ನ್ಯೂನ್ಯತೆ ಹೊಂದಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನ ನೀಡುವ ಯೋಜನೆಯಡಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ  ದಿನ.


ಪ್ರೋತ್ಸಾಹಧನ ನೀಡುವ ಈ ಯೋಜನೆಯಡಿ ಪ್ರಯೋಜನ ಪಡೆಯಲು 07 ವಿಧಗಳ ವಿಕಲಚೇತನರ ಆರೈಕೆದಾರರು 18 ವರ್ಷ ಮೇಲ್ವಟ್ಟವರಾಗಿದ್ದು, ಕಡ್ಡಾಯವಾಗಿ  ವಿಕಲಚೇತನರ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ  ಗುರುತಿನ ಚೀಟಿ (ಯು.ಡಿ..ಡಿ), ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಆರೈಕೆ ಪಡೆಯುವವರು ಹಾಗೂ ಆರೈಕೆ ಮಾಡುವವರು ಪರಸ್ಪರ ಒಪ್ಪಿಗೆ ಲಿಖಿತ ಪ್ರಮಾಣ ಪತ್ರ, ಬಿ.ಪಿ.ಎಲ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಕಲಚೇತನ ವ್ಯಕ್ತಿ ಮತ್ತು ಆರೈಕೆದಾರರ ಆಧಾರ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ ಹಾಗೂ ಇತ್ತೀಚಿನ ವಿಕಲಚೇತನರ ಮತ್ತು ಆರೈಕೆದಾರರ ಜಂಟಿ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.


ಈ ಯೋಜನೆಗಳ ಅರ್ಜಿ ನಮೂನೆಗಳನ್ನು ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ/ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳಿಂದ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.


ಮಾಹಿತಿಗಾಗಿ  ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ - 9611266930,  ಹಿರಿಯೂರು- 9902888901, 9902898901        ಹೊಳಲ್ಕೆರೆ- 9740030227, ಹೊಸದುರ್ಗ - 9741829990, ಮೊಳಕಾಲ್ಮೂರು- 9742725576 ಗಳನ್ನು ಸಂಪರ್ಕಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ, ಆವರಣ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-235284 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ