ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಪ್ರಸಕ್ತ ಸಾಲಿನ 'ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ'ಗೂ (KSET) ಅರ್ಜಿ ಕರೆದಿದೆ.
1. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿವರ:
ಒಟ್ಟು ಹುದ್ದೆಗಳು: 140 (ಇದರಲ್ಲಿ 40 ಹುದ್ದೆಗಳು 'ಕಲ್ಯಾಣ ಕರ್ನಾಟಕ' ವೃಂದದ ಅಭ್ಯರ್ಥಿಗಳಿಗೆ ಮೀಸಲು)
ವಿದ್ಯಾರ್ಹತೆ: ಪಿಯುಸಿ (PUC) ಜೊತೆಗೆ ಡಿ.ಎಡ್ (D.Ed) ಅಥವಾ ಬಿ.ಎಡ್ (B.Ed) ಪೂರ್ಣಗೊಳಿಸಿರಬೇಕು ಹಾಗೂ ಶಿಕ್ಷಕರ ಅರ್ಹತಾ/ಸಾಮರ್ಥ್ಯ ಪರೀಕ್ಷೆಯಲ್ಲಿ (TET) ಉತ್ತೀರ್ಣರಾಗಿರಬೇಕು.
ವಯೋಮಿತಿ: ಗರಿಷ್ಠ ವಯೋಮಿತಿ: 40 ವರ್ಷ. ವಯೋಮಿತಿ ಸಡಿಲಿಕೆ: ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹750,
SC, ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ: ₹500, ವಿಕಲಚೇತನ ಅಭ್ಯರ್ಥಿಗಳಿಗೆ: ₹250.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 21, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 18.
2. KSET ಪರೀಕ್ಷೆ ನೋಂದಣಿ ಆರಂಭ:
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು (Assistant Professor) ಬಯಸುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ KEA ಕೆ-ಸೆಟ್ (KSET) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. UGC ನಿಯಮಾವಳಿಗಳ ಅಡಿಯಲ್ಲಿ ನಡೆಯುವ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲಿದ್ದಾರೆ.
ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್ ಅರ್ಜಿಗಾಗಿ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡಬಹುದು.




