ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬಿ.ಎಡ್. ಕೋರ್ಸ್ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಈ ಪ್ರವೇಶಾತಿಯನ್ನು ಮಾಡಲಾಗುತ್ತದೆ. ಪದವಿ ಶಿಕ್ಷಣ ಪಡೆದು, ಹೆಚ್ಚುವರಿಯಾಗಿ ಟಿಸಿಹೆಚ್ / ಡಿಇಡಿ ಶಿಕ್ಷಣ ತರಬೇತಿ ಹೊಂದಿದ ಸೇವಾ ಶಿಕ್ಷಣ ಅಭ್ಯರ್ಥಿಗಳು ದೂರ ಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.
ಅರ್ಜಿ ಸಲ್ಲಿಸಲು 2026 ರ ಆಗಸ್ಟ್ 10 ಕೊನೆಯ ದಿನಾಂಕವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2026 ರ ಆಗಸ್ಟ್ 16 ರಂದು ನಿಗದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಹಾಗೂ ದೂರವಾಣಿ ಸಂಖ್ಯೆ 080-26603664 ಅಥವಾ ಮೊಬೈಲ್ ಸಂಖ್ಯೆ 9880526439 / 9019526439 ಗೆ ಸಂಪರ್ಕಿಸಬಹುದು ಎಂದು ಬಾಪೂಜಿನಗರ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



