ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಚಿಂತಾಮಣಿಯ ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಎರಡು ವರ್ಷಗಳ ಡಿಪ್ಲೋಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಪಠ್ಯ ಭಾಷೆಯಾಗಿ ಅಭ್ಯಸಿಸಿರಬೇಕು. ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ. 45 ಅಂಕಗಳೊಂದಿಗೆ ಹಾಗೂ ಪ.ಜಾ./ಪ.ಪಂ./ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಜೂನ್ 30, 2026 ರ ಅನ್ವಯ ಅಭ್ಯರ್ಥಿಗಳಿಗೆ 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 600/- ಪ.ಜಾ./ಪ.ಪಂ./ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ. 300/- ನಿಗಧಿಪಡಿಸಲಾಗಿದೆ.
ಅರ್ಜಿ ಶುಲ್ಕವನ್ನು ರಾಷ್ಟ್ರೀಕೃತ ಬ್ಯಾಂಕ್‍ಗಳ ಮೂಲಕ “Comptroller, UAS, Bangalore” ಇವರ ಹೆಸರಿನಲ್ಲಿ ಡಿ.ಡಿ. ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು - 560 065 ಅಥವಾ ಡೀನ್ (ರೇಷ್ಮೆ ಕೃಷಿ), ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ - 563 125 ಇವರಿಗೆ ಜೂನ್ 30 ರೊಳಗೆ ಸಲ್ಲಿಸಬೇಕು.
ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.uasbangalore.edu.in ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 080-23330149, 080-23330984, 9449866914, 9916869534, 8197877712 ಗೆ ಸಂಪರ್ಕಿಸಬಹುದು ಎಂದು ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶನಾಲಯದ ಕೃಷಿ ಮಾಹಿತಿ ಘಟಕದ ಹಿರಿಯ ವಾರ್ತಾತಜ್ಞರು ಹಾಗೂ ಮುಖ್ಯಸ್ಥ ಡಾ. ಕೆ.ಪಿ. ರಘುಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



