Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆಯಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಜಂಟಿ ಸಹಯೋಗದಲ್ಲಿ
, ಉನ್ನತ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದೆ.

2026-27 ನೇ ಸಾಲಿನ ಯುಜಿಸಿ ಅನುಮೋದಿತ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧಿಸ್ಟ್, ಜೈನ್ ಮತ್ತು ಪಾರ್ಸಿ ಧರ್ಮದ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 8.00 ಲಕ್ಷಗಳ ಒಳಗೆ ಇರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 10, 2026 ರಿಂದಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31, 2026 ಆಗಿದೆ. ಅರ್ಜಿಯನ್ನು ಆನ್ ಲೈನ್ ವೆಬ್‍ಸೈಟ್ www.minorityksouportal.com ಮೂಲಕ ಸಲ್ಲಿಸಬೇಕು.

ಈ ಯೋಜನೆಯಡಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳ ಶೈಕ್ಷಣಿಕ ಕೋರ್ಸ್‍ನ ಪ್ರವೇಶಾತಿ ಮತ್ತು ಪರೀಕ್ಷಾ ಶುಲ್ಕವನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ನೇರವಾಗಿ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಪಾವತಿಸಲಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ಉನ್ನತ ಶಿಕ್ಷಣ ಸಿಗಲಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಉನ್ನತ ಶಿಕ್ಷಣ ಯೋಜನೆಯ ಪ್ರಯೋಜನ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ,  ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಹಾಗೂ  ದೂರವಾಣಿ ಸಂಖ್ಯೆ 080-26603664 ಅಥವಾ ಮೊಬೈಲ್ ಸಂಖ್ಯೆ 9880526439 / 9019526439 ಗೆ  ಸಂಪರ್ಕಿಸಬಹುದು ಎಂದು ಬಾಪೂಜಿನಗರ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.