ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯು ಹದಿನಾಲ್ಕು ವಾರಗಳ ಅವಧಿಯ "ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್" ಪ್ರವೇಶಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ತರಬೇತಿ ಕೋರ್ಸ್‍ಗೆ ಎಸ್.ಎಸ್.ಎಲ್.ಸಿ (10ನೇ ತರಗತಿ) ಉತ್ತೀರ್ಣ ಅಥವಾ ಅನುತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ರೂ. 10/- ನಿಗದಿಪಡಿಸಲಾಗಿದೆ.
ಆಸಕ್ತರು ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿರುವ "ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಜಿಕೆವಿಕೆ, ಬೆಂಗಳೂರು-560 065" ಇವರಿಂದ ನಿಗದಿತ ಅರ್ಜಿ ಫಾರಂಗಳನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು 2026ರ ಜುಲೈ 25 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ಈ ದೂರವಾಣಿ ಸಂಖ್ಯೆ 080-29533370 ಹಾಗೂ ಮೊಬೈಲ್: 9731164357 / 9740618692 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



