Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುರಲ್ ಆಫ್ ವಿಜ್ಯುಯಲ್ ಆಟ್ರ್ಸ್ ( ನಾಲ್ಕು ವರ್ಷದ ಎಂಟು ಸೆಮಿಸ್ಟರ್‍ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿ-ಸ್ಟೇಟ್ ಎಜುಕೇಷನ್ ಪಾಲಿಸಿ ಅನ್ವಯ ದೃಶ್ಯಕಲೆಯಲ್ಲಿ 2026-27ನೇ ಸಾಲಿಗೆ ಪ್ರಥಮ ವರ್ಷದ ಬಿವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸು ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in  ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಸಂದರ್ಶನದ ದಿನಾಂಕ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!