LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನ ನವೀಕರಣಕ್ಕೆ  ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ
, ನವದೆಹಲಿ ವತಿಯಿಂದ ನೀಡಲಾಗುವ ಸೆಂಟ್ರಲ್ ಸೆಕ್ಟರ್ ಸ್ಕೀಮ್ ಆಫ್ ಸ್ಕಾಲರ್‍ಶಿಪ್ಸ್ ಫಾರ್ ಕಾಲೇಜ್ ಅಂಡ್ ಯೂನಿವರ್ಸಿಟಿ ಸ್ಟೂಡೆಂಟ್ಸ್’ (Central Sector Scheme Of Scholarships For College And University Students) ಯೋಜನೆಯಡಿ 2026-27ನೇ ಸಾಲಿನ ಎಲ್ಲಾ ಹಂತದ ನವೀಕರಣ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆ ಆರಂಭವಾಗಿದೆ.

ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‍ಸೈಟ್ https://scholarships.gov.in/Students ಮೂಲಕ 2026 ರ ಸೆಪ್ಟೆಂಬರ್ 30 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಜ್ಯದ ಎಲ್ಲಾ ಪದವಿ ಕಾಲೇಜುಗಳು ತಮ್ಮ ಹಂತದಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಆಯಾ ಕಾಲೇಜುಗಳ ಇನ್‍ಸ್ಟಿಟ್ಯೂಟ್ ನೋಡಲ್ ಅಧಿಕಾರಿಗಳು (INO - L1 ಹಂತ) ನಿಗದಿತ ದಿನಾಂಕದೊಳಗೆ ಕೂಲಂಕುಷವಾಗಿ ಪರಿಶೀಲಿಸಬೇಕು. ಯಾವುದೇ ಅರ್ಜಿಗಳು ಪರಿಶೀಲನೆಯಾಗದೇ ಲಾಗಿನ್‍ನಲ್ಲಿ ಬಾಕಿ ಉಳಿಯದಂತೆ ಸೂಕ್ತ ಕ್ರಮ ವಹಿಸಬೇಕು.

ಅಲ್ಲದೆ, ರಾಜ್ಯ ನೋಡಲ್ ಅಧಿಕಾರಿಯಿಂದ ಬರುವ ಕರೆಗಳು, ಇ-ಮೇಲ್‍ಗಳು ಹಾಗೂ ಮಾರ್ಗದರ್ಶನಗಳಿಗೆ ತಕ್ಷಣ ಸ್ಪಂದಿಸಿ ಅರ್ಹ ವಿದ್ಯಾರ್ಥಿಗಳಿಗೆ ಸಹಕರಿಸಲು ಸೂಚಿಸಲಾಗಿದೆ. 

ಪ್ರಸ್ತುತ ಶೈಕ್ಷಣಿಕ ಸಾಲಿನ ಹೊಸ ಅರ್ಜಿಗಳ ಸಲ್ಲಿಕೆಗೆ ಇದುವರೆಗೂ ದಿನಾಂಕ ನಿಗದಿಯಾಗಿಲ್ಲ. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಗಾಗ್ಗೆ ಎನ್‍ಎಸ್‍ಪಿ ಪೋರ್ಟಲ್ (NSP Portal) ವೀಕ್ಷಿಸುವುದು. 

ಹೆಚ್ಚಿನ ಮಾಹಿತಿಗೆ ಇ-ಮೇಲ್ ವಿಳಾಸ: hrdscholarship302@gmail.com ಸಂಪರ್ಕಿಸಬಹುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ