ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳ ಶುಲ್ಕ ಮರುಪಾವತಿಗಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (SSP) ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ವೃತ್ತಿಪರ ಕೋರ್ಸ್‌ಗಳು ಹಾಗೂ ಎಂ.ಫಿಲ್ ಮತ್ತು ಪಿಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‌ನ ಅಧಿಕೃತ ಲಿಂಕ್ https://ssp.postmatric.karnataka.gov.in/ ಮೂಲಕ ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಿ ಕೊನೆಯ ದಿನ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಹತ್ತಿರದ ಜಿಲ್ಲಾ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



