ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (ಯುವಿಸಿಇ) 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬಿ.ಟೆಕ್, ಎಂ.ಟೆಕ್, ಬಿ.ಆರ್ಕ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಬೋಧಿಸಲು Ph.D / M.Tech /PG ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಎಐಸಿಟಿಇ / ಯುಜಿಸಿ ನಿಯಮಗಳ ಪ್ರಕಾರ ಅತಿಥಿ ಉನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ www.uvce.karnataka.gov.in ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಚೇರಿ, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಯುವಿಸಿಇ ಕುಲಸಚಿವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.




