LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮಗ್ರ ಕೃಷಿ ತರಬೇತಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು  ಸಮಗ್ರ ಕೃಷಿ ತರಬೇತಿ-ಹೈನುಗಾರಿಕೆ
, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಅಣಬೆ ಬೇಸಾಯ ಮತ್ತು ಕೃಷಿಗೆ ಸಂಬಂಧಿಸಿದ ವಿಷಯಗಳ ತರಬೇತಿ ನೀಡಲಾಗುವುದು.

ತರಬೇತಿಯು 2026ರ ಆಗಸ್ಟ್ 03 ರಿಂದ ಪ್ರಾರಂಭವಾಗಲಿದ್ದು,  13 ದಿನಗಳ ಕಾಲ ತರಬೇತಿ ನಡೆಯಲಿದೆ. ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.  19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ಹೊಲಿಗೆ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.

 ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಆಗಸ್ಟ್ 03ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.8431329162, 861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST