ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸ್ವತ ಆಸಕ್ತ ರೈತ ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳೊಂದಿಗೆ ತಮ್ಮ ಎಫ್‌ಐಡಿಯನ್ನು ನಮೂದಿಸಬೇಕು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.