ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ. ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಬಿ.ವಿ.ಎ. ಅಥವಾ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಜುಲೈ 18 ರೊಳಗೆ https://uucms.karnataka.gov.in ಜಾಲತಾಣದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಎಂ.ವಿ.ಎ. ಸ್ನಾತಕೋತ್ತರ ಪದವಿಯು ಎರಡು ವರ್ಷಗಳ ನಾಲ್ಕು ಸೆಮಿಸ್ಟರ್‍ಗಳ ಸಿಬಿಸಿಎಸ್ ಪದ್ಧತಿಯ ಕೋರ್ಸ್ ಆಗಿದ್ದು, ಚಿತ್ರಕಲೆ, ಶಿಲ್ಪಕಲೆ ಮತ್ತು ಗ್ರಾಫಿಕ್ಸ್ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿದೆ. ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 0821-2438931 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ತಿಳಿಸಿದ್ದಾರೆ.



