Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ 2024 ಡಿಸೆಂಬರ್ 21 ರಿಂದ 24 ರವರೆಗೆ "ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ" ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ತೋಟಗಾರಿಕೆ ಮೇಳದಲ್ಲಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ, ಪ್ರತಿಯೊಂದು ಜಿಲ್ಲೆಗೆ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಒಬ್ಬ ಕೃಷಿಕರಿಗೆ, ಶ್ರೇಷ್ಠ ತೋಟಗಾರಿಕೆ ರೈತ / ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಯ ಅರ್ಹ ರೈತ / ರೈತ ಮಹಿಳೆಯರು ಅರ್ಜಿ ನಮೂನೆಯನ್ನು, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಛೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋ.ವಿ.ವಿ. ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು ಅಥವಾ

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾಲತಾಣ www.uhsbagalkot.karnataka.gov.in ಮೂಲಕ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ 5ನೇ ನವೆಂಬರ್ 2024 ಸಂಜೆ 5 ರೊಳಗಾಗಿ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಛೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು - 560065 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಡಾ. ಇಟಿಗಿ ಪ್ರಭಾಕರ, ವಿಸ್ತರಣಾ ಮುಂದಾಳು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು ಮೊ.ಸಂ. 9538771475, ಡಾ. ದೊಡ್ಡಬಸಪ್ಪ ಬಿ. ಸಹಾಯಕ ಪ್ರಾಧ್ಯಾಪಕರು, ಕೃಷಿ ಕೀಟಶಾಸ್ತ್ರ, ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು ಮೊ.ಸಂ. 7795072699, ಶ್ರೀಮತಿ ಸೀಮಾ ಎಂ.  ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು ಮೊ.ಸಂ. 7411228096 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ 18004257910ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ