Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸ್ವಯಂಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹ ರಕ್ಷಕ ದಳವು ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಗೃಹರಕ್ಷಕದಳ ಇಲ್ಲಿ ಖಾಲಿಯಿರುವ ಸ್ವಯಂ ಸೇವಾ ಗೃಹ ರಕ್ಷಕದಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಉತ್ತರ ವ್ಯಾಪ್ತಿಯಲ್ಲಿ 21 ಘಟಕಗಳಿದ್ದು, ಹೊಸದಾಗಿ ತಲಘಟ್ಟಪುರ ಘಟಕ ಮತ್ತು ವಿದ್ಯಾರಣ್ಯಪುರ ಘಟಕಗಳು ಸೇರ್ಪಡೆಯಾಗಿವೆ. ಉಳಿದ 18 ಘಟಕಗಳಾದ ಕೆಂಗೇರಿ, ಜ್ಞಾನಬಾರತಿ, ಆರ್.ಆರ್.ನಗರ, ಸುಂಕದಕಟ್ಟೆ, ವಿಜಯನಗರ, ಬಸವೇಶ್ವರನಗರ, ಬಾಪೂಜಿನಗರ, ಬಿನ್ನಿ, ಜೆಜೆ.ನಗರ, ರಾಜಾಜಿನಗರ, ಮಲ್ಲೇಶ್ವರಂ, ನಂದಿನಿ ಲೇಔಟ್, ಯಶವಂತಪುರ, ಹೆಬ್ಬಾಳ, ಹೆಚ್.ಎಂ.ಟಿ. ಪೀಣ್ಯ, ಬಿ..ಎಲ್. ಯಲಹಂಕ ಘಟಗಳಿಗೂ ಅರ್ಜಿಗಳನ್ನು ವಿತರಿಸಲಾಗುವುದು.

ಅರ್ಜಿಗಳನ್ನು ಸಮಾದೇಷ್ಟರ ಕಚೇರಿ, ಗೃಹರಕ್ಷಕದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಪ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ ಕಚೇರಿಯಲ್ಲಿ ಅಕ್ಟೋಬರ್ 18 ರಿಂದ ನವೆಂಬರ್ 16 ರವರೆಗೆ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಉಚಿತವಾಗಿ ವಿತರಿಸಲಾಗುವುದು. ಅರ್ಜಿಯನ್ನು ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ ಟಿಸಿ ಅಥವಾ ಒರಿಜಿನಲ್ ಅಂಕಪಟ್ಟಿಯನ್ನು ತರುವುದು.

ಅಭ್ಯರ್ಥಿಗಳಿಗೆ 19 ವರ್ಷ ವಯಸ್ಸು ತುಂಬಿರಬೇಕು, 10 ನೇ ತರಗತಿ ಉತ್ತೀರ್ಣವಾಗಿರಬೇಕು. ದೈಹಿಕವಾಗಿ ದೃಢಕಾಯವಾಗಿರಬೇಕು ಯಾವುದೇ ನ್ಯೂನತೆ ಇರಬಾರದು. ಕನ್ನಡ ಮತ್ತು ಇಂಗ್ಲೀಷ್ ಕಂಪ್ಯೂಟರ್ ಟೈಪಿಂಗ್, ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಪೈಂಟರ್ ಮತ್ತು ಫ್ಲಂಬರ್ ಕೌಶಲ್ಯಗಳನ್ನು ಹೊಂದಿರಬೇಕು.

ಗೃಹರಕ್ಷಕದಳ ಸಂಸ್ಥೆಯಲ್ಲಿ 3 ವರ್ಷಗಳ ಅವಧಿಗೆ ಮಾತ್ರ ಸೇವೆ ಸಲ್ಲಿಸಬಹುದಾಗಿರುತ್ತದೆ. ಇದು ಖಾಯಂ ನೌಕರಿಯಾಗಿರುವುದಿಲ್ಲ. ಯಾವುದೇ ರೀತಿಯ ಮಾಸಿಕ ಸಂಬಳ / ವಿಶೇಷ ಭತ್ಯೆಗಳನ್ನು ನೀಡುವುದಿಲ್ಲ. ಸರ್ಕಾರವು ನಿಗಧಿಪಡಿಸಿರುವ ಗೌರವಧನವನ್ನು  ಕರ್ತವ್ಯ ನಿರ್ವಹಿಸುವ ಅವಧಿಗೆ ಮಾತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08023142542 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಗೃಹರಕ್ಷಕದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ