Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು 2024-25ನೇ ಸಾಲಿನಲ್ಲಿ ರಾಜ್ಯ ಕೃಷಿ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ.

ಅದರಂತೆ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಎಫ್.ಫಿ.ಓ, ಎನ್,ಜಿ.ಓ, ಇತರೆ ಸಂಘ ಸಂಸ್ಥೆಗಳು ಚಾಲ್ತಿಯಲ್ಲಿರುವ ಸಿ.ಹೆಚ್.ಎಸ್.ಸಿ ಗಳಿಗೆ 1 ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1 ಕಂಬೈನ್ಡ್ ಹಾರ್ವೆಸ್ಟರ್ ಹಬ್‌ನ್ನು ಸ್ಥಾಪನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಎಫ್.ಪಿ.ಓ, ಎನ್.ಜಿ.ಓ, ಇತರೆ ಸಂಘ ಸಂಸ್ಥೆಗಳು ಸಿ.ಹೆಚ್.ಸಿ ಹಾಗೂ ಪರಿಶಿಷ್ಟ ಪಂಗಡದಡಿ ವೈಯಕ್ತಿಕ ಫಲಾನುಭವಿಗಳಿಗೆ ಗರಿಷ್ಟ ಶೇ. 70 ರಂತೆ ಮಾರ್ಗಸೂಚಿಯ ಮಿತಿಗೆ ಒಳಪಟ್ಟು ಸಹಾಯಧನವನ್ನು ನೀಡಲಾಗುವುದು.

ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಂಕ್ ಎನ್‌ಡೆಡ್ ಸಬ್ಸಿಡಿ ಮುಖಾಂತರ ನೀಡಲಾಗುವುದು. ಆಯ್ಕೆಯಾದ ಸಂಸ್ಥೆ, ವೈಯಕ್ತಿಕ ಫಲಾನುಭವಿಗಳಿಗೆ ಕೃಷಿ ಮೂಲಭೂತ ಸೌಕರ್ಯನಿಧಿ ಯೋಜನೆಯಡಿ ಬಡ್ಡಿ ರಿಯಾಯಿತಿಯ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಆಸಕ್ತ ಸಂಘ ಸಂಸ್ಥೆಗಳು ನೊಂದಣಿ ಪ್ರಮಾಣ ಪತ್ರ, ಜಿಎಸ್‌ಟಿ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಸಿಹೆಚ್.ಎಸ್.ಸಿ ನಡೆಸಿದ ಅನುಭವದ ವಿವರಗಳನ್ನು ಹಾಗೂ ವೈಯಕ್ತಿಕ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ, ಎಫ್.ಐ.ಡಿ, ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ,

ಬ್ಯಾಂಕ್ ಪಾಸ್‌ಬುಕ್ ಮತ್ತು ರೂ.100 ಗಳ ಛಾಪಾ ಕಾಗದದ ಮೇಲೆ ಹಬ್‌ನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರದೊಂದಿಗೆ ಇದೇ ಸೆ.30ರೊಳಗೆ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ