LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಬೆಳೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ರೈತರಿಂದ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟ್ರೀಯ ತೋಟಗಾರಿಕೆ ಮಿಷನ್) ಅಡಿ ಹೊಸದಾಗಿ ಬಾಳೆ, ದಾಳಿಂಬೆ, ಹುಣಸೆ, ಡ್ರಾಗನ್ ಫ್ರೂಟ್ ಮತ್ತು ಕಾಳುಮೆಣಸು ಬೆಳೆಯಲು, ಕೃಷಿ ಹೊಂಡ ನಿರ್ಮಾಣ, ಪಾಲಿ ಮನೆ, ಪ್ಲಾಸ್ಟಿಕ್ ಮಲ್ಚಿಂಗ್, ಎರೆಹುಳು ಘಟಕ, ಜೇನು ಸಾಕಾಣೆ ಘಟಕ, ಈರುಳ್ಳಿ ಸಂಗ್ರಹಣಾ ಘಟಕ, ಅಣೆಬೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ನಿಂಬೆ, ನುಗ್ಗೆ, ಮಾವು, ಸಪೋಟ, ಹುಣಸೆ, ದಾಳಿಂಬೆ, ಗುಲಾಬಿ, ನೇರಳೆ, ಡ್ರಾಗನ್ ಫ್ರೂಟ್, ಕಾಳುಮೆಣಸು, ಕರಿಬೇವು ಮತ್ತು ಬದುಗಳಲ್ಲಿ ತೆಂಗು ಇತ್ಯಾದಿ ಬೆಳೆಗಳನ್ನು (ಅಡಿಕೆ ಮತ್ತು ಬಾಳೆ ಹೊರತುಪಡಿಸಿ) ಹೊಸದಾಗಿ ಬೆಳೆಯಲು ಕಾರ್ಯಕ್ರಮದ ಮಾರ್ಗಸೂಚಿಯನ್ವಯ ಅರ್ಹ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.

 ನಿಗದಿತ ಅರ್ಜಿ ನಮೂನೆಗಳನ್ನು ಚಿತ್ರದುರ್ಗದ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿದೆ.

 

ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಈ ಹಿಂದೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ, ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು