LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ ಹುದ್ದೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ
ಅಗ್ನಿವೀರ್ ವಾಯು’ (02/2027) ಹುದ್ದೆಗಳ ಆಯ್ಕೆ ಪರೀಕ್ಷೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ಜುಲೈ 2005 ರಿಂದ 01 ಜನವರಿ 2010 ರ ನಡುವೆ ಜನಿಸಿರಬೇಕು ಹಾಗೂ ನೋಂದಣಿ ದಿನಾಂಕದ ವೇಳೆಗೆ ಗರಿಷ್ಠ 22 ವರ್ಷ ಮೀರಬಾರದು.

ವಿಜ್ಞಾನ ವಿಭಾಗದ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ 10+2/ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಗಳಿಸಿರಬೇಕು (ಇಂಗ್ಲಿಷ್‍ನಲ್ಲಿ ಕನಿಷ್ಠ ಶೇ. 50 ಅಂಕ ಕಡ್ಡಾಯ) ಅಥವಾ ಶೇ. 50 ಅಂಕಗಳೊಂದಿಗೆ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ/ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು. ಇತರ ವಿಭಾಗದ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಇಂಗ್ಲಿಷ್‍ನಲ್ಲಿ ಶೇ. 50 ಅಂಕಗಳೊಂದಿಗೆ ಪಿಯುಸಿ/10+2 ಅಥವಾ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು.

ಅರ್ಜಿಯೊಂದಿಗೆ ಶೈಕ್ಷಣಿಕ ಪ್ರಮಾಣ ಪತ್ರ, ಆಧಾರ್/ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ದೈಹಿಕ ಸಾಮಥ್ರ್ಯ ಪ್ರಮಾಣ ಪತ್ರ ಹಾಗೂ ಭಾವಚಿತ್ರಗಳನ್ನು ಸಲ್ಲಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು https://iafrecruitment.edcil.co.in  ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-295108, ಮೊಬೈಲ್ ಸಂಖ್ಯೆ 9945587060, 7022459064 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ