LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ, ಭಾವನಾತ್ಮಕ ಸಂಬಂಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾರ್ಗದರ್ಶನ ನೀಡುವ ಸಲುವಾಗಿ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ (Academic Resource Person for Mental Health) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 24 ಅರ್ಜಿ ಸಲ್ಲಿಸಲು ಕೊನೆಯ ದಿನ.

2026-27ನೇ ಸಾಲಿಗೆ ಜಿಲ್ಲೆಯ ಆರು ಬ್ಲಾಕ್‍ಗಳ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಸಮಾಲೋಚಕರನ್ನು (Consultant)  ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ ಅಥವಾ ಕೌನ್ಸೆಲಿಂಗ್ ಮನೋವಿಜ್ಞಾನ ವಿಷಯಗಳಲ್ಲಿ ಎಂ.ಎ ಅಥವಾ ಎಂ.ಎಸ್ಸಿ ಪದವಿ ಹೊಂದಿರಬೇಕು. ಜೊತೆಗೆ ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಸೇವಾ ಅನುಭವ ಹೊಂದಿರಬೇಕು. ಕನ್ನಡ, ಇಂಗ್ಲಿμï ಹಾಗೂ ಮೂಲಭೂತ ಕಂಪ್ಯೂಟರ್ ಜ್ಞಾನ ಇರುವುದು ಕಡ್ಡಾಯ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ 2026ರ ಆಗಸ್ಟ್ 24, ಸಂಜೆ 5 ಗಂಟೆಯೊಳಗೆ ಖುದ್ದಾಗಿ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೂಜಾರಿಯಿಂದ ದೇವರಿಗೆ ಸಿಕ್ಕೇ ಇಲ್ಲ ಸ್ವಾತಂತ್ರ್ಯಭಾರತವನ್ನು ಜಾಗತಿಕ ಮ್ಯಾನುಫ್ಯಾಕ್ಚರಿಂಗ್ ಹಬ್ ಮಾಡಲು ಕೌಶಲ್ಯಪೂರ್ಣ ಯುವಪಡೆ ಅಗತ್ಯ: ಹೆಚ್.ಡಿ. ಕುಮಾರಸ್ವಾಮಿವಿಧಾನಮಂಡಲ ಅಧಿವೇಶನ: ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಕಾರ್ಯತಂತ್ರ ಸಭೆರಾಷ್ಟ್ರಧ್ವಜ ಹಾರಿಸಲು ‘ಸಮಯವಿಲ್ಲ’ ಎಂದ ಸಚಿವ ಜಮೀರ್ ವಜಾಕ್ಕೆ ಆರ್‌ಅಶೋಕ್ ಆಗ್ರಹ: ಕಾಂಗ್ರೆಸ್ ವಿರುದ್ಧ ಆಕ್ರೋಶಅಂಡಮಾನ್ ಆಳಸಮುದ್ರದಲ್ಲಿ ಗಿನ್ನಿಸ್ ದಾಖಲೆ ಬರೆದ ಆರ್‌ಅಶೋಕ್ ಪುತ್ರ ಶರತ್: ತಂದೆಯಾಗಿ ಹೆಮ್ಮೆ ವ್ಯಕ್ತಪಡಿಸಿದ ವಿಪಕ್ಷ ನಾಯಕಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಿ: ಕಾಂಗ್ರೆಸ್ ವಿರುದ್ಧ ವಿಧಾನಸೌಧ ಆವರಣದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆರಾಷ್ಟ್ರಧ್ವಜ ಗೌರವಿಸುವುದಕ್ಕಿಂತ ಪಕ್ಷದ ಕೆಲಸ ಮುಖ್ಯವೇ?: ಸಚಿವ ಜಮೀರ್ ರಾಜೀನಾಮೆಗೆ ಆಗ್ರಹ ಸದನದ ಒಳಗೂ-ಹೊರಗೂ ಕಾಂಗ್ರೆಸ್ ವಿರುದ್ಧ ಉಗ್ರ ಹೋರಾಟ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ವಿಭಜನೆಯ ಭೀಕರತೆ ನೆನೆದು ‘ಅಖಂಡ ಭಾರತ’ದ ಸಂಕಲ್ಪ ವಚನ ನೀಡಿದ ಸಿ.ಟಿ. ರವಿ: ತಾಯ್ನಾಡಿನ ಸಾರ್ವಭೌಮತ್ವ ರಕ್ಷಣೆಗೆ ಕರೆತಂದೆ ಮಾಡಿದ ಸಾಲಕ್ಕೆ SSLC ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!