Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವವಿದ್ಯಾಲಯ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೃಪತುಂಗ ವಿಶ್ವವಿದ್ಯಾಲಯದಲ್ಲಿ ಕಚೇರಿ ಸಹಾಯಕರ 04 ಹುದ್ದೆ, ಲೆಕ್ಕ ಸಹಾಯಕರ 01 ಹುದ್ದೆ ಮತ್ತು ಗ್ರಂಥಾಲಯ ಸಹಾಯಕರ 01 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಚೇರಿ ಸಹಾಯಕರ ಹುದ್ದೆಗೆ, ಯಾವುದೇ ಪದವೀಧರರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.
ಲೆಕ್ಕ ಸಹಾಯಕರ ಹುದ್ದೆಗೆ, ಬಿ.ಕಾಂ ಅಥವಾ ಎಂ.ಕಾಂ ಪದವೀಧರರಾಗಿರಬೇಕು. ಟ್ಯಾಲಿ, ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.

ಗ್ರಂಥಾಲಯ ಸಹಾಯಕರ ಹುದ್ದೆಗೆ, ಯಾವುದೇ ಪದವೀಧರರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.
ಎಲ್ಲಾ ಹುದ್ದೆಗಳಿಗೆ ಕಾರ್ಮಿಕ ಕಾಯ್ದೆಯನ್ವಯ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗಧಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು 2025ನೇ ಜನವರಿ 7 ಕೊನೆಯ ದಿನವಾಗಿರುತ್ತದೆ. 2025ನೇ ಜನವರಿ 10ರಂದು ನೇರ ಸಂದರ್ಶನ ನಡೆಸಲಾಗುವುದು. ಅರ್ಜಿಯನ್ನು ಜಾಲತಾಣ https://nublr.karnataka.gov.in  ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಎಲ್ಲಾ ದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಹಾಗೂ 2 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ಕುಲಸಚಿವರು, ನೃಪತುಂಗ ವಿಶ್ವದ್ಯಾಲಯ, ನೃಪತುಂಗ ರಸ್ತೆ, ಬೆಂಗಳೂರು -560 001 ಇಲ್ಲಿಗೆ ಕಳುಹಿಸಬೇಕು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಭತ್ಯೆಗಳನ್ನು ನೀಡಲಾಗುವುದಿಲ್ಲ. ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣ ತಿಳಿಸದೇ ಕರ್ತವ್ಯದಿಂದ ತೆಗದುಹಾಕುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುತ್ತದೆ. ನೃಪತುಂಗ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿಗಾಗಿ ಯಾವುದೇ ತರಹದ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ