ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅಭ್ಯರ್ಥಿಗಳಿಗಾಗಿ ‘ಟೂಲ್ ರೂಮ್ ಮಷಿನಿಸ್ಟ್' ಕೋರ್ಸ್‍ನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
AITT (SCP&TSP) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಉಚಿತ ಕೋರ್ಸ್ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳ ವಯಸ್ಸು 16 ರಿಂದ 35 ವರ್ಷದೊಳಗಿರಬೇಕು. ಇದರೊಂದಿಗೆ ಎಸ್‍ಎಸ್‍ಎಲ್‍ಸಿ ಪಾಸ್ ಅಥವಾ ಫೇಲ್ ಆದ ಎಲ್ಲಾ ವರ್ಗದ ಯುವಕ-ಯುವತಿಯರೂ ಸಹ ಕನಿಷ್ಠ ಶುಲ್ಕದೊಂದಿಗೆ ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ವೇ ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್, ಚಿತ್ರದುರ್ಗ – 577524, ಮೊಬೈಲ್ ಸಂಖ್ಯೆ 9738465834, 9481866855, 8660270535 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.



